8:18 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಸಿಬಿಐ ಕಾರ್ಯಾಚರಣೆ: ರೈಲ್ವೆ ಸಿಬ್ಬಂದಿಗೆ ನಕಲಿ ವೈದ್ಯಕೀಯ ಪ್ರಮಾಣಪತ್ರ ನೀಡುತ್ತಿದ್ದ 3 ಆರೋಪಿಗಳ ಬಂಧನ

12/06/2022, 21:01

ಮಂಗಳೂರು(reporterkarnataka.com):  ರೈಲ್ವೆಯಲ್ಲಿ ನೌಕರರ ಆರೋಗ್ಯ ಕ್ಷಮತೆಯ ಬಗ್ಗೆ ನಕಲಿ ವೈದ್ಯಕೀಯ ಪ್ರಮಾಣ ಪತ್ರವನ್ನು ಒದಗಿಸುತ್ತಿದ್ದ ಓರ್ವ ಆರೋಪಿಯನ್ನು
ಮಂಗಳೂರಿನಲ್ಲಿ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.

ಬೆಂಗಳೂರಿನಿಂದ ಆಗಮಿಸಿದ ಸಿಬಿಐ ತಂಡ ಈ ಕಾರ್ಯಾಚರಣೆ ನಡೆಸಿದೆ. ಮಂಗಳೂರು ನಗರದ ಇಬ್ರಾಹೀಂ ಎಂಬಾತ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ.

ಈತನನ್ನು ಬಂಧಿಸಿರುವ ಬಗ್ಗೆ ಸಿಬಿಐ ಅಧಿಕಾರಿಗಳು ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ರೈಲ್ವೆ ಇಲಾಖೆಯಲ್ಲಿ ವರ್ಷಂಪ್ರತಿ ನೌಕರರು ದೈಹಿಕ ಕ್ಷಮತೆಯ ಬಗ್ಗೆ ರೈಲ್ವೆ ಇಲಾಖೆಯ ಆರೋಗ್ಯ ಇಲಾಖೆಯಿಂದ ಫಿಟ್ ನೆಸ್ ಸರ್ಟಿಫಿಕೇಟ್ ಅನ್ನು ನೀಡಬೇಕು. ಈ ಹಿನ್ನೆಲೆಯಲ್ಲಿ ರೈಲ್ವೆ ನೌಕರರು ಮಂಗಳೂರಿನ ರೈಲ್ವೆ ನಿಲ್ದಾಣದ ಬಳಿಯಿ

ರೈಲ್ವೆ ಇಲಾಖೆಯ ಆರೋಗ್ಯ ಇಲಾಖೆಯಲ್ಲಿ ತಪಾಸಣೆ ನಡೆಸಿ ಸರ್ಟಿಫಿಕೇಟ್ ಪಡೆಯಬೇಕು. ಆದರೆ ಇಬ್ರಾಹೀಂ ಎಂಬಾತನು ನಕಲಿ ವೈದ್ಯಕೀಯ ಪ್ರಮಾಣ ಪತ್ರ ನೀಡುತ್ತಿರುವ ಬಗ್ಗೆ ಮಾಹಿತಿಯಿರುವ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಬಂಧಿತ ಆರೋಪಿ ಇಬ್ರಾಹಿಂ ಸಾವಿರಕ್ಕೂ ಅಧಿಕ ನಕಲಿ ವೈದ್ಯಕೀಯ ಪ್ರಮಾಣ ಪತ್ರ ನೀಡಿರುವುದು ಅಧಿಕಾರಿಗಳಿಗೆ ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು