6:46 AM Tuesday5 - August 2025
ಬ್ರೇಕಿಂಗ್ ನ್ಯೂಸ್
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ‘ರಿದಂ ಆಫ್ ಬಿಎಲ್‌ಆರ್‌’: ವಿಶಿಷ್ಟ ಧ್ವನಿ ಗುರುತು… ಶಿಬು ಸೊರೇನ್ ನಿಧನ: ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆ ಆ. 8ಕ್ಕೆ ಮುಂದೂಡಿಕೆ:… ವಿಶ್ವ ವಿಖ್ಯಾತ ಮೈಸೂರು ದಸರಾ: ಪುಷ್ಪಾರ್ಚನೆ ಮೂಲಕ ಅಭಿಮನ್ಯು ನೇತೃತ್ವದ ಗಜ ಪಯಣಕ್ಕೆ… Shivamogga | ತೀರ್ಥಹಳ್ಳಿ: ಮನೆಗಾಗಿ ಸಾಲ; ಮನನೊಂದ ವೃದ್ದ ದಂಪತಿ ಒಂದೇ ಮರಕ್ಕೆ… Kodagu | ಬೆಕ್ಕೆಸುಡ್ಲೂರಿನಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಪಲ್ಟಿ: ಕುಟ್ಟ- ಪೊನ್ನಂಪೇಟೆ… Kodagu | ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ರ್‍ಯಾಂಬುಟನ್ ಹಣ್ಣು ಮಾರಾಟಕ್ಕೆ ನಿರ್ಬಂಧ; ವ್ಯಾಪಾರಸ್ಥರ… SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:…

ಇತ್ತೀಚಿನ ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭತ್ತದ ಕೃಷಿಗೆ ಟಾರ್ಗೆಟ್ ಫಿಕ್ಸ್:  11 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ

18/06/2021, 08:06

ಮಂಗಳೂರು (reporterkarnataka news):ಜಿಲ್ಲೆಯಲ್ಲಿ ಈ ಬಾರಿ 11 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬಿತ್ತನೆಗೆ ಗುರಿ ಹಮ್ಮಿಕೊಳ್ಳಲಾಗಿದೆ, ಎಮ್.ಓ.ಫೋರ್ ಭತ್ತದ ಬೀಜಕ್ಕೆ ಹೆಚ್ಚಿನ ಬೇಡಿಕೆಯು ಜಿಲ್ಲೆಯಲ್ಲಿದೆ, ಒಂದೊಮ್ಮೆ ಪೂರ್ತಿ ಪ್ರಮಾಣದಲ್ಲಿ ಪೂರೈಸಲು ಆಗದೆ ಇರುವ ಸಂದರ್ಭದಲ್ಲಿ ಅದೇ ತಳಿಯ ಇತರೆ ಭತ್ತದ ಬೀಜಗಳನ್ನು ಪೂರೈಸಬೇಕು ಎಂದು ಜಿಲ್ಲಾ ಪಂಚಾಯತ್‍ನ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಹೇಳಿದರು.

ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ 2021-22ನೇ ಸಾಲಿನ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗೆ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಪೂರ್ವಸಿದ್ಧತೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತಾನಾಡಿದರು.

ಜಿಲ್ಲೆಯ ರೈತರ ಅವಶ್ಯಕತೆಗೆ ಅನುಗುಣವಾಗಿ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳನ್ನು ಪೂರೈಕೆ ಮಾಡಬೇಕು.ಜಿಲ್ಲೆಗೆ 12 ಸಾವಿರ ಟನ್‍ಗಳಷ್ಟು ರಸಗೊಬ್ಬರದ ಅವಶ್ಯಕತೆಗಳಿದ್ದು, ಈಗಾಗಲೇ 6 ಸಾವಿರ ಟನ್‍ಗಳಷ್ಟು ವಿವಿಧ ನಮೂನೆಯ ರಸಗೊಬ್ಬರಗಳು ಪೂರೈಕೆ ಆಗಿದೆ, 3 ಸಾವಿರ ಟನ್‍ಗಳಷ್ಟು ವಿತರಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ಮುಂಗಾರು ಮಳೆಯು ಉತ್ತಮವಾಗಿದ್ದು, ಕೃಷಿ ಚಟುವಟಿಕೆಗಳು ಗರಿಗೆದರಿದ್ದು ರೈತರಿಗೆ ಅಗತ್ಯವಿರುವ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ವಿತರಣೆಗೆ ಅಗತ್ಯ ಕ್ರಮಗಳನ್ನು ತೆಗೆದುಕೊಂಡು ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಬೇಕೆಂದು ಅವರು ನುಡಿದರು.

ಮಂಗಳೂರು ಜಂಟಿ ಕೃಷಿ ನಿರ್ದೇಶಕಿ ಸೀತಾ ಎಂ.ಸಿ, ಉಪಕೃಷಿ ನಿರ್ದೇಶಕ ಮಂಗಳೂರು ವಿಭಾಗ ಬಾನುಪ್ರಕಾಶ್, ಮಂಗಳೂರು ತಾಲೂಕು ಸಹಾಯಕ ಕೃಷಿ ನಿರ್ದೇಶಕಿ ವೀಣಾ ಕೆ.ಆರ್, ಪುತ್ತೂರು ವಲಯ ಉಪ ಕೃಷಿ ನಿರ್ದೇಶಕ ಶಿವಶಂಕರ ದಾನೇಗೌಡ, ಬಂಟ್ವಾಳ ತಾಂತ್ರಿಕ ಅಧಿಕಾರಿ ನಂದನ್ ಶೆಣೈ, ಪುತ್ತೂರು ಸುಳ್ಯ ಸಹಾಯಕ ನಿರ್ದೇಶಕ ನಾರಾಯಣ ಶೆಟ್ಟಿ ಮತ್ತು ಬೆಳ್ತಂಗಡಿ ಸಹಾಯಕ ಕೃಷಿ ನಿರ್ದೇಶಕ ರಂಜಿತ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು