8:04 PM Friday18 - April 2025
ಬ್ರೇಕಿಂಗ್ ನ್ಯೂಸ್
Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:… Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ

ಇತ್ತೀಚಿನ ಸುದ್ದಿ

ರಾಹುಲ್ ಗೆ ಇಡಿ ನೋಟಿಸ್ ವಿರುದ್ಧ ಪ್ರತಿಭಟನೆ: ಮಾಜಿ ಸಿಎಂ ಸಿದ್ದರಾಮಯ್ಯ,ಡಿಕೆಶಿ ಸೇರಿ ಹಲವರು ಪೊಲೀಸ್ ವಶಕ್ಕೆ

13/06/2022, 19:14

ಬೆಂಗಳೂರು(reporterkarnataka.com): ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ 
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಇಡಿ ನೋಟಿಸ್ ನೀಡಿರುವುದನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ನಾಯಕರು ಬೆಂಗಳೂರಿನ ಇಡಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ಸಂದರ್ಭದಲ್ಲಿ ಪೊಲೀಸರು ಅವರನ್ನು ವಶಕ್ಕೆ ತೆಗೆದುಕೊಂಡರು.

ಬೆಂಗಳೂರು ನಗರದ ಲಾಲ್ ಬಾಗ್ ಗೇಟ್ ಮುಂಭಾಗದಲ್ಲಿ ಪ್ರತಿಭಟನೆ ಆರಂಭಿಸಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಇಡಿ ಕಚೇರಿಗೆ ಮುತ್ತಿ ಹಾಕಲು ಯತ್ನಿಸಿದ್ದು, ಕೇಂದ್ರ ಸರ್ಕಾರ, ಪ್ರಧಾನಿ ಮೋದಿ ಹಾಗೂ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದರು.

ಲಾಲ್ ಬಾಗ್ ಗೇಟ್​​ನಿಂದ ಶಾಂತಿನಗರದ ಟಿಟಿಎಂಸಿಯಲ್ಲಿನ ಇಡಿ ಕಚೇರಿಗೆ ಕೈ ಕಾರ್ಯಕರ್ತರ ಜೊತೆಗೂಡಿ ಕೈ ನಾಯಕರು ಪ್ರತಿಭಟನಾ ಮೆರವಣಿಗೆ ನಡೆಸಿದರು. ನೂರಾರು ಕಾರ್ಯಕರ್ತರು ಈ ವೇಳೆ ಸಾಥ್​ ನೀಡಿದರು.ಈ ವೇಳೆ ಪೊಲೀಸರು ಮತ್ತು ಕೈ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು.ಈ ವೇಳೆ ಬ್ಯಾರಿಕೇಡ್ ಹತ್ತಿ ಕೈ ನಾಯಕರು ಆಕ್ರೋಶ ವ್ಯಕ್ತಪಡಿಸಿದರು.

ಮುತ್ತಿಗೆ ಹಾಕಲು ಯತ್ನಿಸಿದ ಕೈ ನಾಯಕರು ಹಾಗೂ ಕೆಲ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಎಂ.ಬಿ. ಪಾಟೀಲ್, ರಾಮಲಿಂಗೇಗೌಡ, ಪ್ರಿಯಾಂಕ್ ಖರ್ಗೆ ಸೇರಿ ಕೈ ನಾಯಕರನ್ನು ವಶಕ್ಕೆ ಪಡೆಯಲಾಯಿತು.

ಕಾಂಗ್ರೆಸ್ ಪ್ರತಿಭಟನೆಯಿಂದ ಡಬಲ್ ರೋಡ್, ಹೊಸೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡುವಂತಾಯಿತು. ಸುಮಾರು ನಾಲ್ಕು ತಾಸಿಗೂ ಹೆಚ್ಚು ಕಾಲ ಸುತ್ತಮುತ್ತ ರಸ್ತೆಗಳಲ್ಲಿ ಭಾರಿ ಸಂಚಾರ ಅಡಚಣೆ ಉಂಟಾಯಿತು.


ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್​​ ಪ್ರತಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸಲೀಂ ಅಹ್ಮದ್, ರಾಮಲಿಂಗಾ ರೆಡ್ಡಿ, ಮಾಜಿ ಸಚಿವರಾದ ಕೆ.ಜೆ. ಜಾರ್ಜ್, ಆರ್.ವಿ. ದೇಶಪಾಂಡೆ, ಶಾಸಕರಾದ ಹ್ಯಾರಿಸ್, ರಂಗನಾಥ್, ಎಂಎಲ್​ಸಿ ಯು.ಬಿ. ವೆಂಕಟೇಶ್ ಮತ್ತಿತರ ಮುಖಂಡರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು