10:51 PM Friday4 - July 2025
ಬ್ರೇಕಿಂಗ್ ನ್ಯೂಸ್
ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು?

ಇತ್ತೀಚಿನ ಸುದ್ದಿ

ಮೀಸಲಾತಿ ಕೊಟ್ಟರೆ ಸರಕಾರಕ್ಕೆ ಸನ್ಮಾನ ಇಲ್ಲದಿದ್ದರೆ ಉಗ್ರ ಹೋರಾಟ:  ಪಂಚಮಸಾಲಿ ಪೀಠದ ಜಗದ್ಗುರು ಎಚ್ಚರಿಕೆ 

13/06/2022, 21:21

ಹಾವೇರಿ(reporterkarnataka.com): ಮೀಸಲಾತಿ ಕೊಟ್ಟರೆ ಸರಕಾರಕ್ಕೆ ಸನ್ಮಾನ ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವ ಜಯಮೃತ್ಯುಂಜಯ ಸರಕಾರಕ್ಕೆ ಎಚ್ಚರಿಕೆ ನೀಡಿದರು.

ರಟ್ಟೀಹಳ್ಳಿ ಪಟ್ಟಣದಲ್ಲಿ ಸೋಮವಾರ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಬೊಮ್ಮಾಯಿ ಅವರೇ ನೀವು ಮೀಸಲಾತಿ ನೀಡುತ್ತೇವೆಂದು ಹೇಳಿದ್ರಿ, ಮೀಸಲಾತಿ ಕೊಟ್ಟು ಋಣ ತೀರಿಸಿ, ನಿಮ್ಮ ಕೈಯಲ್ಲಿ ಮೀಸಲಾತಿ ನೀಡಲು ಆಗದಿದ್ದರೆ ಸ್ಪಷ್ಟವಾಗಿ ಹೇಳಿಬಿಡಿ.ನಮ್ಮ ತಾಳ್ಮೆಯನ್ನ ಪರೀಕ್ಷೆ ಮಾಡಬೇಡಿ, ಸಹನೆ ಕಟ್ಟೆ ಹೊಡೆಯುವುದರೊಳಗೆ ಸರ್ಕಾರ ಸೂಕ್ತ ನಿರ್ಣಯ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಮೀಸಲಾತಿ ಒತ್ತಾಯಿಸಿ ಜೂನ್ 27ಕ್ಕೆ ಸಿಎಂ ಮನೆ ಮುಂದೆ ಸತ್ಯಾಗ್ರಹ ಮಾಡುವುದು ಶತಸಿದ್ಧ. ಹಾವೇರಿ ಜಿಲ್ಲೆಯಲ್ಲಿರುವ ನಮ್ಮ ಸಮಾಜದ ಜನರು ಮಾತ್ರ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿಲ್ಲ ರಾಜ್ಯದ ಮೂಲೆಮೂಲೆಗಳಿಂದ ಒಂದು ಲಕ್ಷಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆಯಿದೆ. ಜೂ 27 ರ ಒಳಗಾಗಿ ಮೀಸಲಾತಿ ಘೋಷಣೆ ಮಾಡಬೇಕೆಂದು ಅವರು ಆಗ್ರಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು