5:53 PM Thursday18 - December 2025
ಬ್ರೇಕಿಂಗ್ ನ್ಯೂಸ್
ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಡ್ರಗ್ಸ್ ಪಾರ್ಟಿ; ನಟಿ ಶ್ರದ್ಧಾ ಕಪೂರ್ ಸಹೋದರ, ಡಿಜೆ ಸಿದ್ಧಾಂತ್ ಕಪೂರ್ ಸಹಿತ 5 ಮಂದಿ ಬಂಧನ

14/06/2022, 09:15

ಬೆಂಗಳೂರು(reporterkarnataka.com):.ಬೆಂಗಳೂರಿನ ಎಂಜಿ ರಸ್ತೆಯ ಟ್ರಿನಿಟಿ ಸರ್ಕಲ್ ಬಳಿ
ನಡೆದಿದ್ದ ಡ್ರಗ್ಸ್ ಪಾರ್ಟಿಯನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ಈಗಾಗಲೇ ಬಾಲಿವುಡ್ ನಟಿ ಶ್ರದ್ಧಾ ಕಪೂರ್ ಸಹೋದರ ಸಿದ್ಧಾಂತ್ ಕಪೂರ್ ಸೇರಿದಂತೆ ಐದು ಜನರನ್ನು ಬಂಧಿಸಲಾಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ರಾಜ್ಯ ಗೃಹಸಚಿವ ಆರಗ ಜ್ಞಾನೇಂದ್ರ, ಸಿದ್ಧಾಂತ್ ಕಪೂರ್ ವಿರುದ್ಧ ಕ್ರಮ ತಗೆದುಕೊಳ್ಳುವುದಕ್ಕಾಗಿ ಈಗಾಗಲೇ ರಕ್ತದ ಮಾದರಿ ಸೇರಿದಂತೆ ಹಲವು ತಪಾಸಣೆಗಳನ್ನು ಮಾಡಲಾಗಿದೆ ಎಂದರು.

ಹಿಂದಿ ಸಿನಿಮಾ ರಂಗದ ನಟನೊಬ್ಬನನ್ನು ಬೆಂಗಳೂರು ಪೊಲೀಸರು ಮಾದಕ ದ್ರವ್ಯ ಸೇವನೆ ಆರೋಪದ ಮೇಲೆ ಬಂಧಿಸಿದ್ದಾರೆ. ಅವರ ವಿರುದ್ಧ ಕಾನೂನು ಪ್ರಕಾರ ಕ್ರಮ ತಗೆದುಕೊಳ್ಳಲಾಗುತ್ತದೆ. ಕರ್ನಾಟಕ ಸರಕಾರ ಮಾದಕ ದ್ರವ್ಯ ಸೇವನೆ ಹಾಗೂ ಮಾರಾಟ ವಿರುದ್ಧ ಅಭಿಯಾನದ ರೂಪದಲ್ಲಿ ಕ್ರಮ ವಹಿಸುತ್ತಿದೆ. ಯುವಕರಲ್ಲಿ ಸಾಮಾಜಿಕ ಪಿಡುಗಾಗಿ ಕಾಡುತ್ತಿರುವ ಮಾದಕ ವಸ್ತುಗಳ ವಿರುದ್ಧದ ಹೋರಾಟದಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಹೇಳಿದ್ದಾರೆ.

ಬಾಲಿವುಡ್ ಖ್ಯಾತ ನಟಿ ಶ್ರದ್ಧಾ ಕಪೂರ್ ಸಹೋದರ ಮತ್ತು ಬಾಲಿವುಡ್ ನಟ, ಡಿಜೆ ಸಿದ್ಧಾಂತ್ ಕಪೂರ್ ಅವರನ್ನು ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದಾರೆ.

ಸಿದ್ಧಾಂತ್ ಹೋಟೆಲ್‍ನಲ್ಲಿ ಡಿಜೆ ಪ್ಲೈಯರ್ ಆಗಿದ್ದು, ಡ್ರಗ್ಸ್ ಸೇವನೆ ಮಾಡಿರೋದು ದೃಢವಾಗಿದೆ. ಸಿದ್ಧಾಂತ್ ಬಾಲಿವುಡ್ ಹಿರಿಯ ನಟ ಶಕ್ತಿ ಕಪೂರ್ ಮಗ ಆಗಿದ್ದು, ಶ್ರದ್ಧಾ ಕಪೂರ್ ಸಹೋದರ ಆಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು