11:57 PM Friday18 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ಜೂನ್ 20ರಂದು  ‘ಬ್ಯಾರಿ ಅರ್ಚೊ ಮಸಾಲೆ 2021’ ಬ್ಯಾರಿ ಸಂಗೀತ ಕಾರ್ಯಕ್ರಮ

18/06/2021, 18:17

ಮಂಗಳೂರು(reporterkarnataka news): ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಬ್ಯಾರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಲೋಕದ ದಿಗ್ಗಜರಾದ ದಿವಂಗತ ಇಬ್ರಾಹಿಂ ತಣ್ಣೀರುಬಾವಿ ಅವರ ನೆನಪಿಗಾಗಿ ‘ಬ್ಯಾರಿ ಅರ್ಚೊ ಮಸಾಲೆ 2021’ ಬ್ಯಾರಿ ಸಂಗೀತ ಲೈವ್ ಕಾರ್ಯಕ್ರಮವನ್ನು  ಅಕಾಡೆಮಿಯ ಯೂಟ್ಯೂಬ್ ಮತ್ತು ಫೇಸ್ ಬುಕ್ ಚಾನೆಲ್ ಮುಖಾಂತರ ಜೂನ್ 20ರಂದು ರಾತ್ರಿ  7 ಗಂಟೆಯಿಂದ 10 ಗಂಟೆಯವರೆಗೆ ಪ್ರಸಾರ ಮಾಡಲಿದೆ. 

ಬ್ಯಾರಿ ಭಾಷೆಯ ಪ್ರಸಿದ್ದ ಗಾಯಕರಾದ ಅನಿತಾ ಡಿಸೋಜಾ, ಮುಹಮ್ಮದ್ ಇಕ್ಬಾಲ್, ಹುಸೈನ್ ಕಾಟಿಪಳ್ಳ, ಅಶ್ರಫ್ ಅಪೋಲೊ, ಶರೀಫ್ ಪರ್ಲಿಯಾ, ಮತ್ತು ಫೈಝ್ ಕಾಟಿಪಳ್ಳ ಇವರು ಭಾಗವಹಿಸಲಿದ್ದಾರೆ. 

ಲಾಕ್ ಡೌನ್ ಆದ ಹಿನ್ನಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ಸಂಗೀತ ಪ್ರಿಯರು ಬಯಸುತ್ತಿದ್ದು, ಈ ಬಗ್ಗೆ ನಿರಂತರವಾಗಿ ಬೇಡಿಕೆಗಳು ಬಂದ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು  ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್  ತಿಳಿಸಿದ್ದಾರೆ.  ಕಾರ್ಯಕ್ರಮದ ಸದಸ್ಯ ಸಂಚಾಲಕರಾಗಿ ಬ್ಯಾರಿ ಸಾಹಿತ್ಯ ಅಕಾಡೆಮಿಯ ಸದಸ್ಯರಾದ ಶಂಶೀರ್ ಬುಡೋಳಿ ಅವರು ಕಾರ್ಯನಿರ್ವಹಿಸಲಿದ್ದಾರೆ. ಪ್ರತಿಯೊಬ್ಬರು ಈ ಕಾರ್ಯಕ್ರಮವನ್ನು ಮನೆಯಲ್ಲಿ ಕುಳಿತು ವೀಕ್ಷಿಸಬೇಕಾಗಿ ಅಕಾಡೆಮಿ ರಿಜಿಸ್ಟ್ರಾರ್ ಪೂರ್ಣಿಮಾ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು