9:58 PM Tuesday23 - December 2025
ಬ್ರೇಕಿಂಗ್ ನ್ಯೂಸ್
ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಕೊರೊನಾ ಸೋಂಕಿಗೆ 100ಕ್ಕೂ ಅಧಿಕ ಪತ್ರಕರ್ತರು ಬಲಿ: ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು

18/06/2021, 20:01

ಮಂಗಳೂರು(reporterkarnataka news): 

ಕೊರೊನಾಕ್ಕೆ ರಾಜ್ಯದಲ್ಲಿ 100ಕ್ಕೂ ಅಧಿಕ ಮಂದಿ ಪತ್ರಕರ್ತರು ಸಾವಿಗೀಡಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಹೇಳಿದರು.

ಅವರು ನಗರದ ಪ್ರೆಸ್ ಕ್ಲಬ್ ನಲ್ಲಿಂದು ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ರನ್ನು ಭೇಟಿ ಮಾಡಿ, ಅಗಲಿದ ಪತ್ರಕರ್ತರಿಗೆ ಸಂತಾಪ ಸೂಚಿಸಿ ಮಾತನಾಡಿದರು.

ಕೊರೊನಾ ಸಂದರ್ಭದಲ್ಲಿ ವೃತ್ತಿನಿರತ ಪತ್ರಕರ್ತರು ಸವಾಲುಗಳ ಮಧ್ಯೆ ಕಾರ್ಯ ನಿರ್ವಹಿಸಿದ್ದಾರೆ. ಈ ನಡುವೆ ಹಲವು ಪತ್ರಕರ್ತರನ್ನು ನಾವು ಕಳೆದು ಕೊಂಡಿದ್ದಾರೆ. ಕಳೆದ ಬಾರಿ 31 ಮತ್ತು ಎರಡನೆ ಅಲೆಯಲ್ಲಿ ಸುಮಾರು 70ಕ್ಕೂ ಅಧಿಕ ಪತ್ರಕರ್ತರು ಬಲಿಯಾಗಿದ್ದಾರೆ. ಈ ಸಂದರ್ಭದಲ್ಲಿ ಸಂತ್ರಸ್ತರ 31 ಪತ್ರಕರ್ತರ  ಕುಟುಂಬಕ್ಕೆ ಮುಖ್ಯಮಂತ್ರಿ ಯವರ ಮೂಲಕ ತಲಾ 5 ಲಕ್ಷ ಪರಿಹಾರ ರಾಜ್ಯ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ವಿತರಿಸಲಾಗಿ ದೆ. ರಾಜ್ಯ ಸರಕಾರ ಪತ್ರಕರ್ತರ ನ್ನು ಕೋವಿಡ್ ಮುಂಚೂಣಿ ಕಾರ್ಯ ಕರ್ತರೆಂದು ಘೋಷಿಸಿದ ಬಳಿಕ ಪತ್ರಕರ್ತರಿಗೆ ಲಸಿಕೆ ನೀಡಲು ಸಾಧ್ಯವಾಗಿದೆ. ಅದಕ್ಕಾಗಿ ರಾಜ್ಯ ಸರಕಾರಕ್ಕೆ ಕೃತಜ್ಞತೆ ಸಲ್ಲಿಸುವುದಾಗಿ ಶಿವಾನಂದ ತಗಡೂರು ನುಡಿದರು.

ಇದೇ ಸಂದರ್ಭದಲ್ಲಿ ಮೂಲ್ಕಿ ತಾಲೂಕು ಪತ್ರಕರ್ತರ ಸಂಘದ ಅಧಿಕೃತ ರಚನೆಗೆ ಚಾಲನೆ ನೀಡಿದರು. ಪತ್ರಕರ್ತರ ಗುರುತಿನ ಚೀಟಿಯನ್ನು ಸಾಂಕೇತಿಕವಾಗಿ ನೀಡಿದರು. ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರು ಕೋವಿಡ್ ಸಂದರ್ಭದಲ್ಲಿ ನಡೆಸುತ್ತಿರುವ ಊಟ ಉಪಹಾರ ವಿತರಣೆ, ಕಿಟ್ ವಿತರಣೆ ಲಸಿಕೆ ನೀಡುವ ಕಾರ್ಯಕ್ರಮ ರಾಜ್ಯಕ್ಕೆ ಮಾದರಿ ಎಂದು ತಗಡೂರು ಶ್ಲಾಘಿಸಿದರು.

 ಸಮಾರಂಭದಲ್ಲಿ ಏಷ್ಯನ್  ಪತ್ರಕರ್ತರ ಒಕ್ಕೂಟದ ಅಧ್ಯಕ್ಷ  ಮದನ್ ಗೌಡ, ದಕ್ಷಿಣ ಕನ್ನಡ  ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀ ನಿವಾಸ ನಾಯಕ್ ಇಂದಾಜೆ, ರಾಜ್ಯ ಕಾರ್ಯ ನಿರತ ಪತ್ರಕರ್ತರ ಸಂಘದ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ  ಅನ್ನು ಮಂಗಳೂರು, ಮುಲ್ಕಿ ವಲಯದ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ನಿಶಾಂತ್ ಶೆಟ್ಟಿ ಉಪಸ್ಥಿತರಿದ್ದರು.

ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್, ಸ್ವಾಗತಿಸಿದರು. ಹರೀಶ್ ಮೋಟುಕಾನ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು