1:22 PM Sunday16 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಜಮ್ಮು ಮತ್ತು ಕಾಶ್ಮೀರ: ಎರಡು ಪ್ರತ್ಯೇಕ ಎನ್‌ಕೌಂಟರ್‌ನಲ್ಲಿ 4 ಮಂದಿ ಉಗ್ರರು ಹತ 

20/06/2022, 17:52

ಶ್ರೀನಗರ(reporterkarnataka.com):
ಜಮ್ಮು ಮತ್ತು ಕಾಶ್ಮೀರದಲ್ಲಿ ನಿನ್ನೆ ರಾತ್ರಿ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ನಾಲ್ವರು ಉಗ್ರರು ಹತರಾಗಿದ್ದಾರೆ. 

ಕುಪ್ವಾರ ಮತ್ತು ಕುಲ್ಗಾಮ್ ಜಿಲ್ಲೆಗಳ ಎರಡು ಪ್ರತ್ಯೇಕ ಘಟನೆಗಳಲ್ಲಿ ಭದ್ರತಾ ಪಡೆಗಳು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಸತ್ತವರಲ್ಲಿ ಒಬ್ಬ ಪಾಕಿಸ್ತಾನಿ ಉಗ್ರಗಾಮಿ ಲಷ್ಕರ್-ಇ-ತೊಯ್ಬಾಗಾಗಿ ಕೆಲಸ ಮಾಡುತ್ತಿದ್ದ ಎಂದು ಅಧಿಕಾರಿಗಳು ಹೇಳಿದ್ದಾರೆ.

ಶೌಕತ್ ಅಹ್ಮದ್ ಶೇಖ್ ಎಂಬ ಉಗ್ರನ ಬಂಧನದ ಮಾಹಿತಿ ಮೇರೆಗೆ ಕುಪ್ವಾರ ಜಿಲ್ಲೆಯ ಲೋಲಾಬ್ ಪ್ರದೇಶದಲ್ಲಿ ಸೇನೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ. ಇಕ್ರಮ್‌ನಲ್ಲಿರುವ ಭಯೋತ್ಪಾದಕ ಶಿಬಿರಗಳನ್ನು ಭದ್ರತಾ ಪಡೆಗಳು ಸುತ್ತುವರಿದಿವೆ. ಈ ಹಿನ್ನೆಲೆಯಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಭದ್ರತಾ ಪಡೆಗಳು ವಿರುದ್ಧ ದಿಕ್ಕಿನಲ್ಲಿ ಗುಂಡಿನ ದಾಳಿ ನಡೆಸಿವೆ. ಘಟನೆಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಲೋಲಾಬ್‌ನಲ್ಲಿ ಗುಂಡಿನ ಚಕಮಕಿ ಮುಂದುವರಿದಿದೆ.

ಈ ನಡುವೆ ಕುಲ್ಗಾಂ ಜಿಲ್ಲಾ ದಮ್ಹಾಲ್ ಹಂಜಿಪೋರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಇದುವರೆಗೆ ಇಬ್ಬರು ಉಗ್ರರನ್ನು ಹತ್ಯೆಗೈದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು