ಇತ್ತೀಚಿನ ಸುದ್ದಿ
ಸಿಲಿಕಾನ್ ಸಿಟಿಯಲ್ಲಿ ಮೋದಿ ಎಕ್ಸ್ ಪ್ರೆಸ್: 33,000 ಕೋಟಿ ಮೌಲ್ಯದ ಯೋಜನೆಗೆ ಪ್ರಧಾನಿ ಶಂಕುಸ್ಥಾಪನೆ
20/06/2022, 21:41
ಬೆಂಗಳೂರು(reporterkarnataka.com): ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ದಿನವಾದ ಇಂದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬಿಡುವಿಲ್ಲದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಪ್ರಧಾನಿ ಅವರು ಸುಮಾರು 33,000 ಕೋಟಿ ಮೌಲ್ಯದ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಪ್ರಧಾನಿ ಅವರು ಬೆಂಗಳೂರಿನ ವಿವಿಧ ರಸ್ತೆಗಳ ಮೂಲಸೌಕರ್ಯ ಮತ್ತು ರೈಲ್ವೆ ಯೋಜನೆಗೆ ಪ್ರಧಾನಿ ಶಂಕುಸ್ಥಾಪನೆ ಮಾಡಿದ್ದಾರೆ.
ಪ್ರಧಾನಿ ಭೇಟಿ ಹಿನ್ನೆಲೆ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಜೊತೆಗೆ ಮೋದಿ ಸಂಚರಿಸುವ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ಬ್ರೇಕ್ ಹಾಕಿ ಪರ್ಯಾಯ ಮಾರ್ಗಗಳ ವ್ಯವಸ್ಥೆ ಮಾಡಲಾಗಿದೆ.
ಮೋದಿ ಅವರು ಸೋಮವಾರ ಮಧ್ಯಾಹ್ನ ಭಾರತೀಯ ವಿಜ್ಞಾನ ಸಂಸ್ಥೆ (IISc)ಯಲ್ಲಿ ಮೆದುಳು ಸಂಶೋಧನಾ ಕೇಂದ್ರವನ್ನು (CBR) ಉದ್ಘಾಟಿಸಿದರು. ಕಾರ್ಯಕ್ರಮದ ಭಾಗವಾಗಿ 832 ಹಾಸಿಗೆಗಳ ಬಾಗ್ಚಿ ಪಾರ್ಥಸಾರಥಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಶಂಕುಸ್ಥಾಪನೆ ನೆರವೇರಿಸಿದರು. ಬೆಂಗಳೂರಿನಲ್ಲಿ ಸಂಪರ್ಕವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಬೆಂಗಳೂರು ಉಪನಗರ ರೈಲು ಯೋಜನೆ (BSRP) ಗೆ ಪ್ರಧಾನಮಂತ್ರಿಯವರು ಅಡಿಪಾಯ ಹಾಕಿದರು.
15,700 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಈ ಯೋಜನೆಯು ಒಟ್ಟು 148 ಕಿಮೀ ಉದ್ದದ 4 ಕಾರಿಡಾರ್‌ಗಳನ್ನು ಹೊಂದಿದೆ. ಯಶವಂತಪುರ ಜಂಕ್ಷನ್ ರೈಲು ನಿಲ್ದಾಣವನ್ನು ಕ್ರಮವಾಗಿ ಸುಮಾರು 500 ಕೋಟಿ ಮತ್ತು 375 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು.
ನಂತರ ಪ್ರಧಾನಿ ಅವರು ಬೆಂಗಳೂರಿನ ಡಾ.ಬಿ.ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾಲಯದ (ಬೇಸ್) ನೂತನ ಕ್ಯಾಂಪಸ್ ಅನ್ನು ಉದ್ಘಾಟಿಸಿದರು.
ಉನ್ನತೀಕರಿಸಿದ 150 ಐಟಿಐಗಳನ್ನು ಲೋಕಾರ್ಪಣೆ ಮಾಡಿದರು. ಬಳಿಕ
ಕೊಮ್ಮಘಟ್ಟದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೈಯ್ಯಪ್ಪನಹಳ್ಳಿಯ ಹವಾನಿಯಂತ್ರಿತ ರೈಲು ನಿಲ್ದಾಣ ಉದ್ಘಾಟಿದರು.
ಜೊತೆಗೆ ಬೆಂಗಳೂರು ಸಬ್ಅರ್ಬನ್ ರೈಲು ಯೋಜನೆ ಮತ್ತು 6 ರಾಷ್ಟ್ರೀಯ ಹೆದ್ದಾರಿ ಯೋಜನೆ ಮತ್ತು ಲಾಜಿಸ್ಟಿಕ್ ಪಾರ್ಕ್‌ಗೆ ಶಂಕುಸ್ಥಾಪನೆ ನೆರವೇರಿಸಿದರು. ನಂತರ ಸಂಜೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸುವ ಪ್ರಧಾನಿ, ನಾಗನಹಳ್ಳಿ ಮತ್ತು ಮೈಸೂರಿನಲ್ಲಿ 480 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಿರುವ ಹೊಸ ಕೋಚಿಂಗ್ ಸಂಕೀರ್ಣಗಳಿಗೆ ಶಿಲಾನ್ಯಾಸ ಮಾಡಿದರು.
…..
ಡಲಿದ್ದಾರೆ. ನಂತರ ಸಂಜೆ 7 ಗಂಟೆಗೆ ಮೈಸೂರಿನ ಸುತ್ತೂರು ಮಠಕ್ಕೆ ಭೇಟಿ ನೀಡಿದರು. ಸಂಜೆ 7.45ಕ್ಕೆ ಮೈಸೂರಿನ ತಾಯಿ ಚಾಮುಂಡೇಶ್ವರಿ ದರ್ಶನ ಪಡೆಯಲಿದ್ದಾರೆ.
ಜೂನ್ 21 ರಂದು, ಎಂಟನೇ ಅಂತರಾಷ್ಟ್ರೀಯ ಯೋಗ ದಿನದ (IDY)ಅಂಗವಾಗಿ ಪ್ರಧಾನಮಂತ್ರಿ ಮೈಸೂರಿನ ಅರಮನೆ ಮೈದಾನದಲ್ಲಿ ಬೆಳಿಗ್ಗೆ 6:30 ಕ್ಕೆ ಸಾಮೂಹಿಕ ಯೋಗ ಪ್ರದರ್ಶನದಲ್ಲಿ ಸಾವಿರಾರು ಜನರೊಂದಿಗೆ ಭಾಗವಹಿಸಲಿದ್ದಾರೆ.