8:24 PM Thursday2 - May 2024
ಬ್ರೇಕಿಂಗ್ ನ್ಯೂಸ್
ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ…

ಇತ್ತೀಚಿನ ಸುದ್ದಿ

ದಕ್ಷಿಣ ಕನ್ನಡ: ಅಶಕ್ತರ ನಿವಾಸಕ್ಕೆ ತೆರಳಿ ಲಸಿಕೆ‌ ನೀಡಲು ಜಿಲ್ಲಾಡಳಿತ ನಿರ್ಧಾರ; ವೆಬ್ ಸೈಟ್ dk.nic.in ನಲ್ಲಿ ನೊಂದಾಯಿಸಿಕೊಳ್ಳಿ

19/06/2021, 07:07

ಮಂಗಳೂರು(reporterkarnataka news):

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ನೀಡಲ್ಪಡುವ ಉಚಿತ ಲಸಿಕಾ ಶಿಬಿರ ಮುಂದುವರೆದಿದ್ದು, ಮುಂದಿನ ದಿನಗಳಲ್ಲಿ ಅಶಕ್ತರಿಗೂ ಉಚಿತ ಲಸಿಕೆ ನೀಡಲು ಜಿಲ್ಲಾಡಳಿತ ನಿರ್ಧರಿಸಿದೆ.

ಈ ಹಿನ್ನಲೆಯಲ್ಲಿ ಅನಾರೋಗ್ಯಕ್ಕೀಡಾದವರಿಗೆ ಮತ್ತು ಅಶಕ್ತ ಹಿರಿಯ ನಾಗರಿಕರು ಸೇರಿದಂತೆ ಮನೆಯಿಂದ ಹೊರ ಬಂದು ಲಸಿಕೆ‌ ಹಾಕಿಸಿಕೊಳ್ಳಲು ಸಾಧ್ಯವಾಗದಿರುವವರ ಮನೆ ಮನೆಗೆ ಬಂದು ಲಸಿಕೆ‌ ನೀಡಲು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾಡಳಿತ, ದ.ಕ.ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ,ರೋಟರಿ ಮಂಗಳೂರು ಹಾಗೂ ಬ್ಯಾಂಕ್ ಆಫ್ ಬರೋಡಾದ ಸಹಯೋಗದೊಂದಿಗೆ ಆರೋಗ್ಯ ಕಾರ್ಯಕರ್ತರು ಮನೆಮನೆಗೆ ಬಂದು ಲಸಿಕೆ‌ ಹಾಕಲಿರುವರು.ಹೀಗಾಗಿ ಜಿಲ್ಲಾಡಳಿತದ ಅಧಿಕೃತ ವೆಬ್ ಸೈಟ್ dk.nic.in ನಲ್ಲಿ ನೊಂದಾಯಿಸಲು ಕೋರಲಾಗಿದೆ. ನೊಂದಾವಣೆಯಾದ ಬಳಿಕ ದಿನ ನಿಗದಿಪಡಿಸಿ ಮನೆ ಮನೆಗೆ ಬಂದು ಲಸಿಕೆ‌ ನೀಡಲಾಗುವುದು.

ಮನೆ ಮನೆ ಲಸಿಕಾ‌ ವಾಹನಕ್ಕೆ ದಿನಾಂಕ 19-6-2021 ರಂದು ಬೆಳಿಗ್ಗೆ 9.30 ಕ್ಕೆ ಮಂಗಳೂರಿನ ಹಂಪನಕಟ್ಟೆಯಲ್ಲಿರುವ ಯುನಿವರ್ಸಿಟಿ ಕಾಲೇಜಿನ ಆವರಣದಲ್ಲಿ ಚಾಲನೆ ನೀಡಲಾಗುವುದು.

ಇತ್ತೀಚಿನ ಸುದ್ದಿ

ಜಾಹೀರಾತು