8:48 PM Tuesday9 - September 2025
ಬ್ರೇಕಿಂಗ್ ನ್ಯೂಸ್
Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆದರಿಕೆ: ಆರೋಪಿ ಬಂಧನ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ… Kodagu | ಚೋರರಿದ್ದಾರೆ ಎಚ್ಚರಿಕೆ: ಕುಶಾಲನಗರ; ಹೆಚ್ಚುತ್ತಿರುವ ಶ್ರೀಗಂಧ ಮರಗಳ ಕಳ್ಳತನ ಹೃದಯಘಾತ: ಕಾರಿನಲ್ಲೇ ಉಸಿರು ನಿಲ್ಲಿಸಿದ ಪೊನ್ನಂಪೇಟೆ ತಾಲೂಕು ಪಂಚಾಯಿತಿ ಪ್ರಭಾರ ಯೋಜನಾಧಿಕಾರಿ Kodagu | ಸರಣಿ ಅಪಘಾತ: ರಸ್ತೆ ಮಧ್ಯೆ ಅಡ್ಡ ನಿಂತಿದ್ದ ಟ್ರ್ಯಾಕ್ಟರ್ ಗೆ…

ಇತ್ತೀಚಿನ ಸುದ್ದಿ

ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಸಿಲುಕಿದ್ದ 15 ಮಂದಿ ಸಿರಿಯಾ ನಾವಿಕರ ರಕ್ಷಣೆ; ಕರಾವಳಿ ರಕ್ಷಣಾ ಪಡೆ ಕಾರ್ಯಾಚರಣೆ

22/06/2022, 10:45

ಮಂಗಳೂರು(reporterkarnataka.com):  ಪ್ರತೀಕೂಲ ಹವಾಮಾನದಿಂದಾಗಿ ಅರಬ್ಬೀ ಸಮುದ್ರದಲ್ಲಿ ಜಿಲ್ಲೆಯ ಕರಾವಳಿ ತೀರದಿಂದ 5.2 ಮೈಲಿ ದೂರದಲ್ಲಿ ಲಂಗರು ಹಾಕಿದ್ದ ವಿದೇಶಿ ಹಡಗಿನಲ್ಲಿದ್ದ 15 ಮಂದಿ ವಿದೇಶಿ ಪ್ರಜೆಗಳನ್ನು ಭಾರತೀಯ ಕರಾವಳಿ ರಕ್ಷಣಾ ಪಡೆಯು (ಐಸಿಜಿ) ರಕ್ಷಣೆ ಮಾಡಿದೆ.

ಸಿರಿಯಾ ದೇಶದ 15 ನಾವಿಕರು ಎಂ.ವಿ.ಪ್ರಿನ್ಸಸ್‌ ಮಿರಾಲ್‌ ಎಂಬ ಹಡಗಿನಲ್ಲಿ ಅರಬ್ಬೀ ಸಮುದ್ರದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದರು. ಅವರನ್ನು  ಐಸಿಜಿ ಸಿಬ್ಬಂದಿಗಳು ಮಂಗಳವಾರ ರಕ್ಷಣೆ ಮಾಡಿದ್ದಾರೆ. ಹಡಗಿನಲ್ಲಿ 8 ಸಾವಿರ ಟನ್‌ ಉಕ್ಕಿನ ಕಾಯಿಲ್‌ಗಳನ್ನು ಚೀನಾದ ಟಿಯಾಂಜಿನ್‌ನಿಂದ ಲೆಬನಾನ್‌ಗೆ ಸಾಗಿಸಲಾಗುತ್ತಿತ್ತು. ಹಡಗಿನ ಒಳಭಾಗದಲ್ಲಿ ಸಣ್ಣ ರಂಧ್ರದ ಮೂಲಕ ನೀರು ಒಳಗೆ ನುಗ್ಗಿತ್ತು. ಅದನ್ನು ದುರಸ್ತಿ ಪಡಿಸುವ ಸಲುವಾಗಿ ಈ ಹಡಗನ್ನು ನವಮಂಗಳೂರು 

ಬಂದರಿಗೆ ತರಲು ಅನುಮತಿ ನೀಡುವಂತೆ ಕ್ಯಾಪ್ಟನ್‌ ಈ ಮೇಲ್‌ ಮೂಲಕ ದಕ್ಷಿಣ ಕನ್ನಡ ಜಿಲ್ಲಾಡಳಿತವನ್ನು ಕೋರಿದ್ದರು.

ಈ ನಡುವೆ ಭಾರತೀಯ ಕರಾವಳಿ ರಕ್ಷಣಾ ಪಡೆಯ ಸಿಬ್ಬಂದಿ ಪ್ರತೀಕೂಲ ಹವಾಮಾನವನ್ನು ಲೆಕ್ಕಿಸದೇ ವಿಕ್ರಮ್‌ ಹಾಗೂ ಅಮರ್ಥ್ಯ ಹಡಗುಗಳಲ್ಲಿ ಸ್ಥಳಕ್ಕೆ ಧಾವಿಸಿ, ಸಮುದ್ರದಲ್ಲಿ ಸಿಲುಕಿದ್ದ ಸಿರಿಯಾ ಪ್ರಜೆಗಳನ್ನು ದಡಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ.

…….

ಹಿಂದೂ ಮಹಾಸಾಗರ ಪ್ರದೇಶದ ವ್ಯಾಪ್ತಿಯಲ್ಲಿ ಪತ್ತೆ ಮತ್ತು ರಕ್ಷಣಾ ಕಾರ್ಯಾಚರಣೆಗೆ ನೋಡೆಲ್‌ ಏಜೆನ್ಸಿ ಆಗಿರುವ ಭಾರತೀಯ ಕರಾವಳಿ ರಕ್ಷಣಾ ಪಡೆಯ ರಕ್ಷಣಾ ಸಾಮರ್ಥ್ಯವನ್ನು ಈ ಯಶಸ್ವಿ ಕಾರ್ಯಾಚರಣೆಯು ಮತ್ತೆ ಸಾಬೀತು ಮಾಡಿದೆ. ‘ನಾವು ರಕ್ಷಿಸುತ್ತೇವೆ’ ಎಂಬ ಧ್ಯೇಯಕ್ಕೆ ಕರಾವಳಿ ರಕ್ಷಣಾ ಪಡೆಯು ಬದ್ಧವಾಗಿರುವುದನ್ನು ಎತ್ತಿ ತೋರಿಸಿದೆ ಎಂದು ಐಸಿಜಿ ಪ್ರಕಟಣೆಯಲ್ಲಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು