ಇತ್ತೀಚಿನ ಸುದ್ದಿ
ಕ್ರೀಡಾರಂಗದಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದೀರಾ? ಹಾಗಾದರೆ ಅರ್ಜುನ ಪ್ರಶಸ್ತಿ ನಿಮ್ಮದಾಗಿಸಿಕೊಳ್ಳಿ
19/06/2021, 07:35

ಮಂಗಳೂರು (reporterkarnataka news): ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಮಂತ್ರಾಲಯದಿಂದ 2021ನೇ ಸಾಲಿಗೆ ಕ್ರೀಡೆಯಲ್ಲಿ ಅತ್ಯುನ್ನತ ಸಾಧನೆ ಮಾಡಿರುವ ಕ್ರೀಡಾಪಟುಗಳಿಂದ ಅರ್ಜುನ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ.
ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ಜೂನ್ 21 ರಂದು ಸಂಜೆ 5 ಗಂಟೆಯೊಳಗೆ ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಮಂತ್ರಾಲಯಕ್ಕೆ ಇ-ಮೇಲ್ ಮುಖಾಂತರ ಸಲ್ಲಿಸುವಂತೆ ಸೂಚಿಸಲಾಗಿದೆ.
ಹೆಚ್ಚಿನ ವಿವರಗಳಿಗೆ ಉಪನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳಾ ಕ್ರೀಡಾಂಗಣ, ದಕ್ಷಿಣ ಕನ್ನಡಜಿಲ್ಲೆ (ದೂರವಾಣಿ ಸಂಖ್ಯೆ-0824-2451264) ಇವರನ್ನು ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತುಕ್ರೀಡಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.