1:45 PM Sunday16 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಸ್ಮಾರ್ಟ್ ಸಿಟಿಯಿಂದ ಜನಪರ ಕಾರ್ಯಕ್ರಮ: ಶಾಸಕ ವೇದವ್ಯಾಸ್ ಕಾಮತ್ ಮೆಚ್ಚುಗೆ

23/06/2022, 12:52

ಮಂಗಳೂರು(reporterkarnataka.com): ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ನಗರದ ಅಭಿವೃದ್ದಿ ಕಾಮಗಾರಿಗಳೊಂದಿಗೆ ಹಲವು ಜನಪರ ಕಾರ್ಯಕ್ರಮಗಳನ್ನು ಸಹ ಹಮ್ಮಿಕೊಳ್ಳಲಾಗುತ್ತಿದೆ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್  ಹೇಳಿದರು.

ಅವರು ನಗರದ ಲೇಡಿಹಿಲ್‍ನಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಆರಂಭಗೊಂಡು ಏಳು ವರ್ಷ ಕಳೆದಿರುವ ನೆನಪಿಗಾಗಿ ಹಮ್ಮಿಕೊಳ್ಳಲಾದ ಮನಮಹೋತ್ಸವ ಕಾರ್ಯಕ್ರಮದಲ್ಲಿ ಸಸಿ ನೆಟ್ಟು ಮಾತನಾಡಿದರು.

ಜಿಲ್ಲೆಯ ಅಭಿವೃದ್ಧಿಗಾಗಿ ಜಾರಿಗೊಂಡಿರುವ ಸ್ಮಾರ್ಟ್ ಸಿಟಿ ಯೋಜನೆ ಆರಂಭಗೊಂಡು ಏಳು ವರ್ಷ ಪೂರ್ಣಗೊಂಡಿದೆ. ಈ ಸಂದರ್ಭದಲ್ಲಿ ಸಾರ್ವಜನಿಕರ ಸಹಭಾಗಿತ್ವದೊಂದಿಗೆ ನಗರದ ಪರಿಸರಕ್ಕೆ ಪೂರಕವಾದ ಮನಮಹೋತ್ಸವ, ಸ್ವಚ್ಚತಾ ಅಭಿಯಾನಗಳನ್ನು ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಬೀದಿ ನಾಟಕಗಳನ್ನು ಏಳು ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ, ಆ ಮೂಲಕ ಸ್ಮಾರ್ಟ್ ಸಿಟಿ ಯೋಜನೆ ಕೇವಲ ಕಾಮಗಾರಿಗಳಿಗಷ್ಟೇ ಸೀಮಿತವಲ್ಲ ಎಂದು ಸಾರ್ವಜನಿಕರಿಗೆ ಮನವರಿಕೆ ಮಾಡುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.

ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ ಮಾತನಾಡಿ, ನಗರಗಳನ್ನು ಸಮಗ್ರವಾಗಿ ಅಭಿವೃದ್ಧಿ ಮಾಡುವ ದೃಷ್ಟಿಯಿಂದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕನಸಿನ ಯೋಜನೆಯಾದ ಸ್ಮಾರ್ಟ್ ಸಿಟಿ ಯೋಜನೆ ಜಾರಿಯಾಗಿ 7 ವರ್ಷ ಕಳೆದಿದೆ ಹಾಗೂ ಜಿಲ್ಲೆ ಅಭಿವೃದ್ಧಿಯಾಗುತ್ತಿರುವ ಪ್ರಯುಕ್ತ ಏಳು ಎಂಬ ಸಂಖ್ಯೆಯನ್ನು ಸಾಂಕೇತಿಕವಾಗಿಟ್ಟುಕೊಂಡು ದೇಶದಾದ್ಯಂತ ಸಂಭ್ರಮಾಚರಣೆ ನಡೆಸಲಾಗುತ್ತಿದೆ. ಮಹಾನಗರಪಾಲಿಕೆ ವತಿಯಿಂದ ಜೂ.19ರಿಂದ 25ರ ವರೆಗೆ ಜನಪರ ಕಾರ್ಯಕ್ರಮಗಳೊಂದಿಗೆ ಏಳು ತಂಡಗಳ, ಏಳು ಓವರ್‍ಗಳ ಪಂದ್ಯಾಟವನ್ನೂ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. 


ಉಪ ಮೇಯರ್ ಸುಮಂಗಲಾ ರಾವ್, ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ಮೂಡ ಅಧ್ಯಕ್ಷ ರವಿಶಂಕರ್ ಮಿಜಾರ್, ಸ್ಮಾರ್ಟ್ ಸಿಟಿ ನಿರ್ದೇಶಕ ಸುಧೀರ್ ಶೆಟ್ಟಿ, ಸ್ಮಾರ್ಟ್ ಸಿಟಿ ಅಧಿಕಾರಿಗಳಾದ ಲಿಂಗೇಗೌಡ, ಅರುಣ್ ಪ್ರಭಾ, ಚಂದ್ರಕಾಂತ್, ಮಹಾನಗರ ಪಾಲಿಕೆ ಸದಸ್ಯ ಗಣೇಶ್ ಕುಲಾಲ್ ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು