12:59 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು…

ಇತ್ತೀಚಿನ ಸುದ್ದಿ

ಬೆಂಗ್ರೆ: ಮೃತ ಮೀನುಗಾರನ ಕುಟುಂಬಕ್ಕೆ ಶಾಸಕ ವೇದವ್ಯಾಸ ಕಾಮತ್ 6 ಲಕ್ಷ ರೂ. ಚೆಕ್ ಹಸ್ತಾಂತರ

23/06/2022, 21:16

ಮಂಗಳೂರು(reporterkarnataka.com): ಮೀನುಗಾರಿಕೆಗೆ ತೆರಳಿದ್ದ ಸಂದರ್ಭದಲ್ಲಿ ಅವಘಡದಿಂದ ಮೃತಪಟ್ಟ ಮೀನುಗಾರರೊಬ್ಬರ ಕುಟುಂಬಕ್ಕೆ ಮೀನುಗಾರರ ಪರಿಹಾರ ನಿಧಿಯಿಂದ 6 ಲಕ್ಷ ಬಿಡುಗಡೆಗೊಂಡಿದ್ದು ಶಾಸಕ ವೇದವ್ಯಾಸ್ ಕಾಮತ್ ಅವರು ಸಂತ್ರಸ್ತ ಕುಟುಂಬಕ್ಕೆ ಚೆಕ್ ಹಸ್ತಾಂತರಿಸಿದರು. 

ಕಳೆದ ಬುಧವಾರದಂದು ಬೆಂಗ್ರೆ ಸ್ಯಾಂಡ್ಸ್ ಫಿಟ್ ನಿವಾಸಿ ಜಯ ಪುತ್ರನ್  ಅಳಿವೆ ಬಾಲಿನಿನ ಬಳಿ ಬೆಳಗಿನ ಜಾವ ಬೀಸು ಬಲೆಯೊಂದಿಗೆ ಮೀಗಾರಿಕೆ ಮಾಡುತಿದ್ದ ಸಂದರ್ಭದಲ್ಲಿ ಗಾಳಿ ಮಳೆಯ ರಭಸಕ್ಕೆ ನೀರಿಗೆ ಬಿದ್ದು ಮೃತಪಟ್ಟಿದ್ದರು‌. ಈ ವಿಚಾರ ತಿಳಿದ ತಕ್ಷಣ ರಾಜ್ಯ ಸರಕಾರದಿಂದ ಕುಟುಂಬದ ಸದಸ್ಯರಿಗೆ ಪರಿಹಾರ ಧನ ಬಿಡುಗಡೆಗೊಳಿಸಲು ಮನವಿ ಮಾಡಿಕೊಂಡಿದ್ದೆ. ಅದರಂತೆ ರಾಜ್ಯ ಮೀನುಗಾರರ ಸಂಕಷ್ಟ ಪರಿಹಾರ ನಿಧಿಯಿಂದ 6 ಲಕ್ಷ ಬಿಡುಗಡೆಯಾಗಿದ್ದು, ಕುಟುಂಬದ ಸದಸ್ಯರಿಗೆ ಹಸ್ತಾಂತರಿಸಲಾಯಿತು ಎಂದು ಹೇಳಿದರು.

ಮೀನುಗಾರರ ಕುರಿತು ನಮ್ಮ ಸರಕಾರದ ಅವಧಿಯಲ್ಲಿ ಸಾಕಷ್ಟು ಜನೋಪಯೋಗಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಮೀನುಗಾರರ ಸಂಕಷ್ಟದ ಸಂದರ್ಭದಲ್ಲಿ ನಮ್ಮ ಆಡಳಿತ ವ್ಯವಸ್ಥೆ ತ್ವರಿತವಾಗಿ ಸಹಕಾರ ನೀಡಿದೆ‌ ಎಂದು ಹೇಳಿದ್ದಾರೆ. 

ಈ ಸಂದರ್ಭದಲ್ಲಿ ಮಾಜಿ ಕಾರ್ಪೋರೇಟರ್ ಮೀರಾ ಕರ್ಕೇರ, ಬಿಜೆಪಿ ಮುಖಂಡರಾದ ಹೇಮಚಂದ್ರ ಸಾಲ್ಯಾನ್, ಲೋಕೇಶ್ ಬೆಂಗ್ರೆ, ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು