8:16 AM Sunday26 - April 2026
ಬ್ರೇಕಿಂಗ್ ನ್ಯೂಸ್
ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ?

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಭಾರಿ ಮಳೆ: ಚಿಕ್ಕೋಡಿಯಲ್ಲಿ 7 ಸೇತುವೆ ಜಲಾವೃತ, ರಾಣಿಬೆನ್ನೂರಿನಲ್ಲಿ ಹೆದ್ದಾರಿ ಕುಸಿತ, ಕರಾವಳಿಯಲ್ಲಿ ತೋಟಕ್ಕೆ ನುಗ್ಗಿದ ನೀರು

19/06/2021, 15:00

ಬೆಳಗಾವಿ/ಮಂಗಳೂರು/ಹಾಸನ/ದಾವಣಗೆರೆ(reporterkarnataka news):  ರಾಜ್ಯದ ಬಹುತೇಕ ಕಡೆ ಕಳೆದ ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಒಂದೆಡೆ ಪ್ರವಾಹದ ಭೀತಿ ಎದುರಾದರೆ, ಇನ್ನೊಂದೆಡೆ ಭೂ ಕುಸಿತ ಉಂಟಾಗುತ್ತಿದೆ. ಭಾರಿ ವರ್ಷಧಾರೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. 


ಸತತ ಮಳೆಗೆ ಉತ್ತರ ಕರ್ನಾಟಕ, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಕರಾವಳಿ ಜಿಲ್ಲೆಗಳಲ್ಲಿ ಕೃಷಿಭೂಮಿ, ಗದ್ದೆ, ತೋಟಗಳಿಗೆ ನೆರೆ ನೀರು ನುಗ್ಗಿದೆ. ಕೆಲವು ಕಡೆಗಳಲ್ಲಿ ಮನೆಗಳಿಗೂ ನೀರು ನುಗ್ಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ. ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ದಾವಣಗೆರೆ ಸಮೀಪದ ರಾಣೆಬೆನ್ನೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂ ಕುಸಿತವಾಗಿದ್ದು, ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 766ಸಿ ಯಲ್ಲಿ ರಸ್ತೆ ಕುಸಿತವುಂಟಾಗಿದ್ದು, ರಾಣೆಬೆನ್ನೂರು ಮಾರ್ಗದಿಂದ ಶಿಕಾರಿಪುರ, ಹೊಸನಗರ, ಬೈಂದೂರು ಮಾರ್ಗದ ಮೂಲಕ ಹೋಗುವ ವಾಹನಗಳಿಗೆ ಪರ್ಯಾಯ ಮಾರ್ಗ ಸೂಚಿಸಲಾಗಿದೆ. ಹೊಸನಗರ, ಮಾಸ್ತಿಕಟ್ಟೆ, ಸಿದ್ದಾಪುರ ಮಾರ್ಗವಾಗಿ ವಾಹನ ಸಂಚಾರಕ್ಕೆ ಸೂಚಿಸಲಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರದ ಪ್ರೇಮನಗರದಲ್ಲಿ ಭಾರಿ ಮಳೆಗೆ ತಡೆಗೋಡೆ ಸಮೇತ ರಸ್ತೆ ಕುಸಿದಿದೆ. ಇಲ್ಲಿ ಸಂಚಾರ ಸಂಪೂರ್ಣ ಅಸ್ತವ್ಯವಸ್ತವಾಗಿದೆ. ರಸ್ತೆಯ ಒಂದು ಭಾಗ ಸಂಪೂರ್ಣ ಕುಸಿದಿದೆ. ಇದರಿಂದಾಗಿ ಸುತ್ತಮುತ್ತಲಿನ ಹತ್ತಾರು ಮನೆಗಳಿಗೂ ಆತಂಕ ಎದುರಾಗಿದೆ.

ಉತ್ತರ ಕರ್ನಾಟಕದ ಬೆಳಗಾವಿ, ಬಾಗಲಕೋಟೆ, ಹುಬ್ಬಳ್ಳಿ-ಧಾರವಾಡ  ಜಿಲ್ಲೆಗಳಲ್ಲಿ ಕಳೆದ ಐದು ದಿನಗಳಿಂದ ಎಡೆಬಿಡದೇ ಮಳೆಯಾಗುತ್ತಿದ್ದು, ಘಟಪ್ರಭಾ, ಕೃಷ್ಣಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಪ್ರವಾಹ ಭೀತಿ ಎದುರಾಗಿದೆ. ಬೆಳಗಾವಿಯ ಚಿಕ್ಕೋಡಿಯ ವಿಭಾಗದ 7 ಸೇತುವೆಗಳು ಜಲಾವೃತಗೊಂಡಿವೆ. ಕಲ್ಲೋಳ ಗ್ರಾಮದ ದತ್ತ ದೇವಾಲಯ, ಬಂಗಾಲಿ ಬಾಬಾ ದೇವಸ್ಥಾನಗಳು ಜಲಾವೃತಗೊಂಡಿವೆ.

ಇತ್ತೀಚಿನ ಸುದ್ದಿ

ಜಾಹೀರಾತು