12:21 PM Saturday30 - November 2024
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ: ಬಗ್ಗಸಗೋಡು ಗ್ರಾಮದಲ್ಲಿ ನಾಯಿ ದಾಳಿಯಿಂದ 5ರ ಹರೆಯದ ಬಾಲಕಿಗೆ ಗಾಯ ಹೆಚ್ಚುತ್ತಿರುವ ಗರ್ಭಿಣಿಯರ, ಬಾಣಂತಿಯರ ಸಾವು ಪ್ರಕರಣ: ಬಳ್ಳಾರಿ ವಿಮ್ಸ್‌ ಆಸ್ಪತ್ರೆಗೆ ಸರಕಾರದಿಂದ ಸರ್ಜರಿ!! ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ, ಗರ್ಭಿಣಿಯರ ಸಾವು: ತನಿಖೆಗೆ ಅಗ್ರಹಿಸಿ ಜನವಾದಿ ಮಹಿಳಾ ಸಂಘಟನೆ… ಲಂಡನ್ ವಾಲ್ವ್ಸ್ 2024 ರಲ್ಲಿ ಮಿಂಚಿದ ಭಾರತ: ಹೃದಯ ಕವಾಟ ಆವಿಷ್ಕಾರ ‘ಮೈವಾಲ್… ಹುಣಸಗಿ: ವಿದ್ಯಾರ್ಥಿಗಳಿಂದ ಕೆಎಸ್ಸಾರ್ಟಿಸಿ ಬಸ್ ತಡೆದು ಪ್ರತಿಭಟನೆ; ಸಾರ್ವಜನಿಕರ ಸಾಥ್ ಅಡಿಕೆ ಬೆಳೆಗಾರರ ಸಮಸ್ಯೆ: ಕರಾವಳಿ ಸಂಸದರಿಂದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್… ಡಿ.8ರಂದು ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬ: ಬಿಷಪ್ ಡಾ. ಪೀಟರ್… ಕರ್ತವ್ಯಲೋಪ: ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅಮಾನತು ರಾಜ್ಯ ಸರಕಾರದ ಜನಪರ ಕೆಲಸಕ್ಕೆ ಮತದಾರರ ಜೈ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್… ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ

ಇತ್ತೀಚಿನ ಸುದ್ದಿ

ಆರೆಸ್ಸೆಸ್‌ ಬೈಯುವ ಸಿದ್ದರಾಮಯ್ಯರ ಚಾಳಿ ಈಗ ಕುಮಾರಸ್ವಾಮಿಗೆ ಬಂದಿದೆ: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ

27/06/2022, 19:10

ಬೆಂಗಳೂರು(reporterkarnataka.com): ಆರ್‌ಎಸ್‌ಎಸ್‌ ಬೈಯ್ಯೋದು ಮಾಜಿ ಮುಖ್ಯಮಂತ್ರಿ
ಸಿದ್ದರಾಮಯ್ಯರ ಕೆಟ್ಟಚಾಳಿ ಆಗಿತ್ತು. ಈಗ ಅದು ಕುಮಾರಸ್ವಾಮಿಗೂ ಬಂದಿದೆ. ಆರ್‌ಎಸ್‌ಎಸ್‌ ಬೈದರೆ ಸತ್ತ ಮೇಲೆ ಸ್ವರ್ಗಕ್ಕೆ ಹೋಗಬಹುದು ಎಂದು ಕುಮಾರಸ್ವಾಮಿ ತಿಳಿದಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಕುಟುಕಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರಗಳ ರಚನೆಗೆ ಆರ್‌ಎಸ್‌ಎಸ್‌ ಪರ್ಸೆಂಟೇಜ್‌ ರೂಪದಲ್ಲಿ ಹಣ ಸಂಗ್ರಹಿಸುತ್ತಿದೆ ಎಂದು ಎಚ್‌.ಡಿ.ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಆರ್‌ಎಸ್‌ಎಸ್‌ಗೆ ಬೈಯ್ಯದಿದ್ದರೆ ಅವರಿಗೆ ತಿಂದ ಅನ್ನ ಜೀರ್ಣ ಆಗಲ್ಲ. ಹೀಗಾಗಿ ಸಂಘಟನೆ ವಿರುದ್ಧ ವೃಥಾ ಆರೋಪ ಮಾಡುತ್ತಿದ್ದಾರೆ. ಅವರು ಸ್ವರ್ಗಕ್ಕೆ ಹೋಗಲಿ ಎಂಬುದು ನಮ್ಮ ಆಸೆ ಎಂದು ಲೇವಡಿ ಮಾಡಿದರು.

ವಿರೋಧ ಪಕ್ಷ ಇರಬೇಕು ಎಂಬುದು ನಮಗೂ ಆಸೆ. ನಿಮ್ಮ ಎಂಎಲ್‌ಎಗಳನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಆಗದಿದ್ದರೆ ನಾವೇನು ಮಾಡುವುದು. ತಮ್ಮ ಶಾಸಕರನ್ನು ಶಿಸ್ತುಬದ್ಧವಾಗಿ, ವಿಶ್ವಾಸದಿಂದ ಇಟ್ಟುಕೊಂಡರೆ, ಸ್ವಾತಂತ್ರ್ಯ ಕೊಟ್ಟರೆ ಅವರೇಕೆ ಬಿಟ್ಟು ಹೋಗುತ್ತಾರೆ. ಮಹಾರಾಷ್ಟ್ರದಲ್ಲಿ ಶಾಸಕರಿಗೆ ಮುಖ್ಯಮಂತ್ರಿ ಭೇಟಿಗೆ ಅವಕಾಶವೇ ಇರಲಿಲ್ಲ. ಬಿಜೆಪಿಯಲ್ಲಿ ಆ ಪ್ರಶ್ನೆಯೇ ಇಲ್ಲ. ಇಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ. ಎಲ್ಲರೊಂದಿಗೂ ಮುಕ್ತವಾಗಿ ಮಾತನಾಡಲು ಅವಕಾಶವಿದೆ. ಮೋದಿ ಅವರಂಥ ಒಳ್ಳೆಯ ನಾಯಕರು ಇದ್ದಾರೆ. ಹೀಗಾಗಿ ಬೇರೆ ಪಕ್ಷಗಳ ಶಾಸಕರು ಬಿಜೆಪಿಗೆ ಬರುತ್ತಾರೆ ಎಂದು ಮಹಾರಾಷ್ಟ್ರದಲ್ಲಿನ ಬೆಳವಣಿಗೆಗಳನ್ನು ಈಶ್ವರಪ್ಪ ಸಮರ್ಥಿಸಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು