9:06 AM Thursday26 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಶೀಘ್ರದಲ್ಲೇ ಜೆಡಿಎಸ್ ನ ಮತ್ತೊಂದು ವಿಕೆಟ್ ಪತನ? ಅರಸೀಕೆರೆ ಶಾಸಕ ಶಿವಲಿಂಗೇಗೌಡ ಗುಡ್ ಬೈ ಹೇಳುತ್ತಾರಾ? 

27/06/2022, 19:17

ಭಾನುಪ್ರಿಯ ಹೊಳೆನರಸೀಪುರ ಹಾಸನ

info.reporterkarnataka@gmail.con

ಹಾಸನ ಜಿಲ್ಲೆಯ ಅರಸೀಕೆರೆ ಕ್ಷೇತ್ರದ ಶಾಸಕ ಶಿವಲಿಂಗೇಗೌಡ ಜೆಡಿಎಸ್‌ ಗೆ ಗುಡ್ ಬೈ ಹೇಳುತ್ತಾರಾ? ಅಂತಹದ್ದೊಂದು ವರ್ತಮಾನ ಇದೀಗ ಎಲ್ಲೆಡೆ ಹರಡಲಾರಂಭಿಸಿದೆ.

ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆ ತೀವ್ರಗೊಂಡಿದೆ. ಜೆಡಿಎಸ್ ನಿಂದ ಈಗಾಗಲೇ ಕೋಲಾರದ ಶಾಸಕರು ನಿರ್ಗಮಿಸಿದ್ದಾರೆ. ಇದೀಗ ಶಿವಲಿಂಗೇ ಗೌಡ ಅವರು ಪಕ್ಷ ತ್ಯಜಿಸಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ
ಜೆಡಿಎಸ್‌ ಪಕ್ಷದ ವಾಟ್ಸಾಪ್‌ ಗ್ರೂಪ್‌ನಿಂದ ಶಿವಲಿಂಗೇಗೌಡ ಎಕ್ಸಿಟ್‌ ಆಗಿದ್ದಾರೆ. ಭಾನುವಾರ ಸಂಜೆಯಿಂದ ಪಕ್ಷದ ಎಲ್ಲ ಗ್ರೂಪ್‌ಗಳಿಂದ ಅವರು
ಎಕ್ಸಿಟ್‌ ಆಗುತ್ತಿದ್ದಾರೆ.

ಇನ್ನು ಜೆಡಿಎಸ್‌ ನಾಯಕರ ಜತೆ ಶಿವಲಿಂಗೇಗೌಡ ಅಂತರ ಕಾಯ್ದುಕೊಳ್ಳುತ್ತಿರುವುದು ಸದ್ಯ ಚರ್ಚೆಗೆ ಗ್ರಾಸವಾಗಿದೆ. ಗೌಡರು ಶೀಘ್ರ ಜೆಡಿಎಸ್‌ ತೊರೆಯಲಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ.

ಇತ್ತೀಚಿನ ಸುದ್ದಿ

ಜಾಹೀರಾತು