12:08 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

ಮಾಣಿ ಸಮೀಪ ನಡುರಸ್ತೆಯಲ್ಲೇ ಯುವತಿಯ ಅಮಾನುಷ ಕೊಲೆ: ಆಟೋದಲ್ಲಿ ಬಂದ ತಂಡದ ಕೃತ್ಯ; ಆರೋಪಿಗಳ ಬಂಧನ

27/06/2022, 22:40

ಮಂಗಳೂರು(reporterkarnataka.com): ಸ್ಕೂಟರ್ ನಲ್ಲಿ ತೆರಳುತ್ತಿದ್ದ ಯುವತಿಯೊಬ್ಬಳ ಮೇಲೆ ಆಟೋದಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಚೂರಿಯಿಂದ 
ಇರಿದು ಕೊಲೆ ಮಾಡಿದ ಅಮಾನುಷ ಘಟನೆ ಮಾಣಿಯ ನೇರಳಕಟ್ಟೆ ಎಂಬಲ್ಲಿ ನಡೆದಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ.

ಮಾಣಿಯ ಕಾಪಿಕಾಡು ನಿವಾಸಿ ದಿ. ತ್ಯಾಂಪ ಪೂಜಾರಿ ಅವರ ಪುತ್ರಿ, ಪ್ರಸ್ತುತ ಅನಂತಾಡಿಯ ದೇವಿ ನಗರ ನಿವಾಸಿ ಶಕುಂತಲಾ(35) ಕೊಲೆಗೀಡಾದ ಮಹಿಳೆ ಎಂದು ಗುರುತಿಸಲಾಗಿದೆ.

ಪುತ್ತೂರು ಕಡೆಯಿಂದ ಮಾಣಿ ಕಡೆಗೆ ಆಕ್ಟೀವಾ ವಾಹನದಲ್ಲಿ ತೆರಳುತ್ತಿದ್ದ ವೇಳೆ ಆಟೋ ರಿಕ್ಷಾದಲ್ಲಿ ಬಂದ ತಂಡ ಮಾರಕಾಯುಧಗಳಿಂದ ದಾಳಿ ನಡೆಸಿದೆ. ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ಕೊಂಡೊಯ್ದುರಾದರೂ ಅಷ್ಟರೊಳಗಾಗಲೇ ಆಕೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ವಿಟ್ಲ ಠಾಣಾ ಇನ್ಸ್ ಪೆಕ್ಟರ್ ಹೆಚ್.ಇ. ನಾಗರಾಜ್ ರವರ ನೇತೃತ್ವದ ಪೊಲೀಸರ ತಂಡ ಆಗಮಿಸಿ ಮಾಹಿತಿ ಸಂಗ್ರಹಿಸಿದೆ. ಮೃತ ಮಹಿಳೆ ಪುತ್ತೂರಿನಲ್ಲಿ ಹೊಟೇಲ್ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು