11:47 AM Wednesday13 - May 2026
ಬ್ರೇಕಿಂಗ್ ನ್ಯೂಸ್
ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ… ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿಭತ್ಯೆ ಶೇ. 1.50ರಷ್ಟು ಹೆಚ್ಚಳ: ಸರ್ಕಾರದ…

ಇತ್ತೀಚಿನ ಸುದ್ದಿ

ಆತಂಕ ಬೇಡ, ಲಘು ಭೂ ಕಂಪನದ ಪ್ರದೇಶ ಪರಿಶೀಲನೆ: ಸಚಿವ ಎಸ್.ಅಂಗಾರ 

28/06/2022, 21:15

ಮಂಗಳೂರು(reporterkarnataka.com) : ಸುಳ್ಯ ಪರಿಸರದಲ್ಲಿ ಲಘು ಭೂ ಕಂಪನದ ಅನುಭವ ಉಂಟಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಇಲಾಖೆಯ ತಜ್ಞರು ತಕ್ಷಣ ಪರಿಶೀಲನೆ ನಡೆಸಿ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ಬಂದರು, ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ತಜ್ಞರನ್ನು ಈಗಾಗಲೇ ಸಂಪರ್ಕಿಸಿ, ಭೂಮಿ ಕಂಪಿಸಿದ ಪ್ರದೇಶಕ್ಕೆ ಭೇಟಿ ನೀಡಲು ಸೂಚಿಸಲಾಗಿದೆ. ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವ ಬಗ್ಗೆ ಸಲಹೆ ನೀಡಲು ಅಗತ್ಯ ಕ್ರಮಕೈಗೊಳ್ಳುವಂತೆ ತಿಳಿಸಲಾಗಿದೆ. ಜಿಲ್ಲಾಡಳಿತ ಕೂಡಾ ಮುಂಜಾಗ್ರತಾ ಕ್ರಮ ವಹಿಸಲು ಸನ್ನದ್ಧವಾಗಿದೆ. ಜನತೆ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ. ಸಾಮಾಜಿಕ ಜಾಲತಾಣದ ಮೂಲಕ ಹರಡುತ್ತಿರುವ ವದಂತಿಗಳಿಗೆ ಜನತೆ ಕಿವಿಗೊಡಬಾರದು  ಎಂದು ಅವರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು