ಇತ್ತೀಚಿನ ಸುದ್ದಿ
ದ.ಕ., ಸೇರಿದಂತೆ 13 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರಿಕೆ: ಉಳಿದ ಕಡೆ ಅನ್ ಲಾಕ್; ಬೆಂಗಳೂರಿನಲ್ಲಿ ಬಸ್, ಮೆಟ್ರೋಗೆ ಅವಕಾಶ
19/06/2021, 19:49
ಬೆಂಗಳೂರು(reporterkarnataka news): ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ 13 ಜಿಲ್ಲೆಗಳಲ್ಲಿ ಲಾಕ್ ಡೌನ್ ಎಂದಿನಂತೆ ಮುಂದುವರಿಯಲಿದ್ದು, ರಾಜ್ಯದ ಉಳಿದ ಎಲ್ಲ ಜಿಲ್ಲೆಗಳು ಸೋಮವಾರದಿಂದ ಅನ್ ಲಾಕ್ ಆಗಲಿದೆ.
ಬೆಂಗಳೂರಿನಲ್ಲಿ ಕೆಎಸ್ಸಾರ್ಟಿಸಿ ಮತ್ತು ಬಿಎಂಟಿಸಿ ಬಸ್ ಗಳ ಓಡಾಟಕ್ಕೆ ಅವಕಾಶ ನೀಡಲಾಗಿದೆ. ಆದರೆ ಶೇ. 50ರಷ್ಟು ಪ್ರಯಾಣಿಕರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಮೆಟ್ರೋ ರೈಲು ಕೂಡ ಓಡಾಟ ನಡೆಸಲಿದೆ. ಆಟೋರಿಕ್ಷಾ, ಟ್ಯಾಕ್ಸಿಗಳಿಗೆ ಅನುಮತಿ ನೀಡಲಾಗಿದೆ.
ಎಲ್ಲ ಅಗತ್ಯ ವಸ್ತುಗಳ ಅಂಗಡಿಗಳು ತೆರೆದುಕೊಳ್ಳಿದೆ. ಆಭರಣದಂಗಡಿ, ಮೊಬೈಲ್ ಅಂಗಡಿ, ಸೆಲೂನ್ ಗೆ ಅವಕಾಶ ಕಲ್ಪಿಸಲಾಗಿದೆ. ಬಾರ್ ಗಳಲ್ಲಿ ಪಾರ್ಸೆಲ್ ಗೆ ಅನುಮತಿ ನೀಡಲಾಗಿದೆ. ಥಿಯೇಟರ್ ಗಳಿಗೆ ಅವಕಾಶ ನೀಡಲಾಗಿಲ್ಲ. ಹಾಗೆ ರಾತ್ರಿ 7ರಿಂದ ಬೆಳಗ್ಗೆ 5ರ ತನಕ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ.














