6:27 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಕೋಲಾರ: ರೈತರಿಗೆ ಕಿಸಾನ್ ರೈಲು ಸೇವೆಗೆ ಚಾಲನೆ: ಶ್ರೀನಿವಾಸಪುರದ ಮಾವು ಟ್ರೈನಲ್ಲೇ ದಿಲ್ಲಿಗೆ !

19/06/2021, 21:28

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ರೈತರು , ಕಿಸಾನ್ ರೈಲು ಸೇವೆಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು . ಉತ್ಪನ್ನಗಳನ್ನು ಕಡಿಮೆ ವೆಚ್ಚದಲ್ಲಿ ಹೊರ ರಾಜ್ಯಗಳಿಗೆ ರವಾನಿಸುವುದರ ಮೂಲಕ ಒಳ್ಳೆ ಲಾಭ ಗಳಿಸಬೇಕು ಎಂದು ಸಂಸದ ಸದಸ್ಯ ಎಸ್.ಮುನಿಸ್ವಾಮಿ ಹೇಳಿದರು . 


ದೊಡ್ಡನತ್ತ ರೈಲು ನಿಲ್ದಾಣದಲ್ಲಿ ಶನಿವಾರ ಕಿಸಾನ್ ರೈಲು ಸೇವೆಗೆ ಚಾಲನೆ ನೀಡಿ ಮಾತನಾಡಿ ಕಿಸಾನ್ ರೈಲು ಸೇವೆ ಆರಂಭದೊಂದಿಗೆ ಈ ಭಾಗದ ರೈತರ ಬಹು ದಿನಗಳ ಕನಸು ನನಸಾಗಿದೆ. ಬೇಡಿಕೆಗೆ ಅನುಗುಣವಾಗಿ ರೈತರ ರೈಲನ್ನು ಓಡಿಸಲಾಗುವುದು . ರೈತರು ತಮ್ಮ ಉತ್ಪನ್ನಗಳಿಗೆ ಹೊರ ರಾಜ್ಯಗಳಿಂದ ಬೇಡಿಕೆ ಪಡೆದುಕೊಂಡು ಶೇ .೫೦ ರ ರಿಯಾಯಿತಿ ದರದಲ್ಲಿ ಸಾಗಾಣಿಕೆ ಮಾಡಬಹುದಾಗಿದೆ ಎಂದು ಹೇಳಿದರು . 

ರಸ್ತೆ ಮೂಲಕ ದೆಹಲಿಗೆ ಮಾವು ಮತ್ತಿತರ ಉತ್ಪನ್ನಗಳನ್ನು ಸಾಗಿಸಲು ಕೆಜಿಯೊಂದಕ್ಕೆ ರೂ .೭.೮೦ ಖರ್ಚು ಬರುತ್ತದೆ . ರೈಲಿನ ಮೂಲಕ ರೂ .೨.೮೨ ಖರ್ಚು ತಗಲುತ್ತದೆ . ಮಾವಿನ ಹಣ್ಣನ್ನು ಮಾತ್ರವಲ್ಲದೆ , ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಲ್ಲಿ ಹೆಚ್ಚಾಗಿ ಬೆಳೆಯುವ ಟೊಮೇಟೊ ಮತ್ತಿತರ ತರಕಾರಿಗಳನ್ನೂ ಸಹ ದೇಶದ ವಿವಿಧ ನಗರಗಳಿಗೆ ಸಾಗಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ನುಡಿದರು . 

ಬಂಗಾರಪೇಟೆ , ಕೋಲಾರ , ಚಿಕ್ಕಬಳ್ಳಾಪುರ ಮೂಲಕ ಬೆಂಗಳೂರು ಸೇರುವ ರೈಲು ಮಾರ್ಗವನ್ನು ವಿದ್ಯುತೀಕರಣ ಗೊಳಿಸಲಾಗುವುದು . ಈ ಕಾರ್ಯಕ್ಕೆ  ಸಚಿವರು ಹಸಿರು ನಿಶಾನೆ ತೋರಿಸಿದ್ದಾರೆ ಎಂದು ಹೇಳಿದರು.


 ಚಿಂತಾಮಣಿ ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಮಾತನಾಡಿ , ಕಿಸಾನ್ ರೈಲು ಸಂಕಷ್ಟದಲ್ಲಿರುವ ರೈತರಿಗೆ ವರದಾನವಾಗಲಿದೆ . ಮೊದಲ ಬಾರಿಗೆ ಇಲ್ಲಿಂದ ದೆಹಲಿಯ ಆದರ್ಶ ನಗರಕ್ಕೆ ೨೫೦ ಟನ್ ಮಾವಿನ ಹಣ್ಣನ್ನು ಕಳಿಸಲಾಗುತ್ತಿದೆ . ರೈತರ ಹಿತದೃಷ್ಟಿಯಿಂದ ಈ ಪ್ರಕ್ರಿಯೆ ಮುಂದುವರಿಯಲಿದ್ದು , ಹೆಚ್ಚಿನ ಅನುಕೂಲವಾಗುವುದು .ರೈತರು ನೇರವಾಗಿ ಸಂಬಂಧಪಟ್ಟ ರೈಲ್ವೆ ಅಧಿಕಾರಿಗಳನ್ನು ಸಂಪರ್ಕಿಸಿ ಸೇವೆ ಪಡೆದುಕೊಳ್ಳಬೇಕು ಎಂದು ನುಡಿದರು . ರೈಲ್ವೆ ಉಪ ವ್ಯವಸ್ಥಾಪಕ ಅಶೋಕ್ ಕುಮಾರ್ ಶರ್ಮ , ಕೋಲಾರ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಡಾ . ಕೆ.ಎನ್. ವೇಣುಗೋಪಾಲ್ , ತಾಲ್ಲೂಕು ಘಟಕದ ಅಧ್ಯಕ್ಷ ಅಶೋಕ್ ರೆಡ್ಡಿ , ಜಿಲ್ಲಾ ಮಾವು ಬೆಳೆಗಾರರ ಸಂಘದ ಅಧ್ಯಕ್ಷ ನೀಲಟೂರು ಚಿನ್ನಪ್ಪರೆಡ್ಡಿ , ಮಾಜಿ ಅಧ್ಯಕ್ಷ ಬಂಡಪಲ್ಲಿ ಚಂದ್ರಾರೆಡ್ಡಿ , ಮುಖಂಡರಾದ ಎಂ.ಲಕ್ಷ್ಮಣಗೌಡ , ನಾರಾಯಣಸ್ವಾಮಿ , ಪುರಸಭಾ ಸದಸ್ಯರಾದ ನಾಗರಾಜ್ , ಪತಿವ್ವಲ್ಲಾ ಇದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು