5:25 PM Monday6 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

ಕೊಡಗಿನಲ್ಲಿ ಪ್ರವಾಹದ ಭೀತಿ: ಜಲಾನಯನ ಪ್ರದೇಶದ ನಿವಾಸಿಗಳಿಗೆ ಮುನ್ನೆಚ್ಚರಿಕೆ ಸೂಚನೆ

02/07/2022, 08:36

ಮಡಿಕೇರಿ(reporterkarnataka.com): ಕೊಡಗು ಜಿಲ್ಲೆಯಲ್ಲಿ ಈ ಬಾರಿಯೂ ಪ್ರವಾಹದ ಭೀತಿ ಎದುರಾಗಿದೆ. ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿದೆ. ಜಲಾನಯನ ಪ್ರದೇಶದಲ್ಲಿ ಮುಂದಿನ ದಿನಗಳಲ್ಲಿ ಭಾರೀ ಪ್ರಮಾಣದ ಮಳೆಯಾಗುವ ಸಾಧ್ಯತೆ ಕುರಿತು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಹಾರಂಗಿ ಜಲಾನಯನ ಪ್ರದೇಶದಲ್ಲಿ ಹೆಚ್ಚಾಗಿ ಮಳೆಯಾಗುತ್ತಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿರುತ್ತದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಲಾನಯನ ಪ್ರದೇಶಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುವ ಸಂಭವವಿದ್ದು, ಒಳಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಂಭವವಿದೆ.

ಜಲಾಶಯವು ಶೀಘ್ರವೇ ಗರಿಷ್ಠ ಮಟ್ಟ ತಲುಪುವುದರಿಂದ ನದಿಗೆ ಹೆಚ್ಚುವರಿ ನೀರನ್ನು ಹೊರಗೆ ಬಿಡಲಾಗುವುದು. ಆದ್ದರಿಂದ ಹಾರಂಗಿ ಮತ್ತು ಕಾವೇರಿ ನದಿಯ ಪಾತ್ರದಲ್ಲಿರುವ ಮತ್ತು ನದಿ ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿ ಪಾಸ್ತಿ ಹಾಗೂ ಜನಜಾನುವಾರು ರಕ್ಷಣೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಕುಶಾಲನಗರ ಹಾರಂಗಿ ಪುನರ್ವಸತಿ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಐ.ಕೆ.ಪುಟ್ಟಸ್ವಾಮಿ ಅವರು ಕೋರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು