11:19 PM Tuesday16 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ನಲ್ಲಿ ಸಿದ್ದು- ಶಿವಕುಮಾರ್ ನಡುವೆ ಡಿಶುಂ ಡಿಶುಂ?: ಜಮೀರ್ ವಿರುದ್ಧ ಹೈಕಮಾಂಡ್ ಗೆ ದೂರು?

20/06/2021, 08:59

ಬೆಂಗಳೂರು(reporterkarnataka news): ಆಡಳಿತರೂಢ ಬಿಜೆಪಿಯಲ್ಲಿ ಭಿನ್ನಮತ ಸ್ವಲ್ಪ ಮಟ್ಟಿಗೆ ತಣ್ಣಗಾಗುತ್ತಿದ್ದಂತೆ ಪ್ರಮುಖ ಪ್ರತಿಪಕ್ಷವಾದ ಕಾಂಗ್ರೆಸ್ ನಲ್ಲಿ ಅಸಮಾಧಾನ ಹೊಗೆಯಾಡಲಾರಂಭಿಸಿದೆ. ಮಾಜಿ ಸಚಿವ ಜಮೀರ್ ಖಾನ್ ವಿಷಯದಲ್ಲಿ ಪಕ್ಷದ ಇಬ್ಬರು ಪ್ರಮುಖ ನಾಯಕರೊಳಗೆ ಮುಸುಕಿನ ಗುದ್ದಾಟ ಆರಂಭವಾಗಿದೆ.

ಜಮೀರ್ ಖಾನ್ ಅವರು ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಪದೇ ಪದೇ ಹೇಳುತ್ತಿರುವುದು ಮತ್ತು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ವಿರುದ್ಧ ನಿಂದನಾತ್ಮಕ ಹೇಳಿಕೆ ನೀಡುತ್ತಿರುವುದು ಈ ಎಲ್ಲ ಬೆಳವಣಿಗೆಗೆ ಕಾರಣ ಎನ್ನಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಈಗಾಗಲೇ ಈ ಕುರಿತು ಜಮೀರ್ ಅವರಿಗೆ ಎಚ್ಚರಿಕೆ ಕೂಡ ನೀಡಿದ್ದಾರೆ. ಆದರೆ ಜಮೀರ್ ಅವರು ಇದು ಯಾವುದಕ್ಕೂ ಕ್ಯಾರೇ ಮಾಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ಜಮೀರ್
ವಿರುದ್ಧ ಕಾಂಗ್ರೆಸ್ ಹೈಕಮಾಂಡ್ ಗೆ ಶಿವಕುಮಾರ್ ಅವರು ದೂರು ನೀಡಲಿದ್ದಾರೆ ಎನ್ನಲಾಗಿದೆ.

ಜಮೀರ್ ಖಾನ್ ಅವರು ಹೋದ ಕಡೆಗಳೆಲ್ಲ ಸಿದ್ದರಾಮಯ್ಯ ಅವರೇ ಮುಂದಿನ ಮುಖ್ಯಮಂತ್ರಿ, ಅವರನ್ನು 40 ಸಾವಿರ ಮತಗಳ ಅಂತರದಲ್ಲಿ ಗೆಲ್ಲಿಸುತ್ತೇನೆ ಎಂದು ಹೇಳಿಕೊಳ್ಳುತ್ತಿರುವುದು ಮತ್ತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಹೇಳಿಕೆ ನೀಡುತ್ತಿರುವ ಬಗ್ಗೆ ಶಿವಕುಮಾರ್ ತಕರಾರು ಎತ್ತಿದ್ದಾರೆ. ಕುಮಾರಸ್ವಾಮಿ ವಿರುದ್ಧ ಪದೇ ಪದೇ ನಿಂದನಾತ್ಮಕ ಹೇಳಿಕೆ ನೀಡುವುದು, ಏಕ ವಚನ ಪ್ರಯೋಗ ಮಾಡುವುದರಿಂದ ರಾಜ್ಯದಲ್ಲಿ ಒಕ್ಕಲಿಗರ ಮತ ಪಡೆಯುವುದು ಕಷ್ಟ ಎನ್ನುವುದು ಕೆಪಿಸಿಸಿ ಅಧ್ಯಕ್ಷರ ವಾದವಾಗಿದೆ. ಜತೆಗೆ ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಎಂದು ಬಿಂಬಿಸುವುದು ಸರಿಯಲ್ಲ, ನಮ್ಮದು ಸಾಮೂಹಿಕ ನಾಯಕತ್ವ ಎನ್ನುವುದು ಶಿವಕುಮಾರ್ ಅವರ ಅಭಿಪ್ರಾಯ ಎನ್ನಲಾಗಿದೆ. ಹಾಗಾಗಿ
ರಾಹುಲ್ ಗಾಂಧಿ ಹುಟ್ಟುಹಬ್ಬದ ನಿಮಿತ್ತ ಶುಭ ಕೋರಲು ದೆಹಲಿಗೆ ಹೋಗಿರುವ ಶಿವಕುಮಾರ್ ಅವರು ಜಮೀರ್ ವಿರುದ್ಧ ದೂರು ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು