10:14 PM Tuesday28 - April 2026
ಬ್ರೇಕಿಂಗ್ ನ್ಯೂಸ್
Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ…

ಇತ್ತೀಚಿನ ಸುದ್ದಿ

ಅಕ್ರಮ ಗೋಸಾಗಾಟ‌ ತಡೆಯಲು ಪೊಲೀಸ್ ಇಲಾಖೆಗೆ ಶಾಸಕ ವೇದವ್ಯಾಸ ಕಾಮತ್ ಸೂಚನೆ

04/07/2022, 17:09

ಮಂಗಳೂರು(reporterkarnataka.com): ಮಂಗಳೂರಿನಲ್ಲಿ ಅಕ್ರಮ ಗೋಸಾಗಾಟ ಹಾಗೂ ಗೋವಧೆ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸ್ ಇಲಾಖೆಗೆ ಶಾಸಕ ಡಿ. ವೇದವ್ಯಾಸ ಕಾಮತ್ ಸೂಚನೆ ನೀಡಿದ್ದಾರೆ. 

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಯಾದರೂ ಅಕ್ರಮವಾಗಿ ಗೋಹತ್ಯೆ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಕೇರಳ – ಕರ್ನಾಟಕದಲ್ಲಿ ಅಕ್ರಮವಾಗಿ ಕಾರ್ಯಚರಿಸುವ ಕಸಾಯಿ ಖಾತೆಗಳನ್ನು ನಿರ್ಮಿಸಿ ಗೋಹತ್ಯೆ ನಡೆಸುವ ಕುರಿತು ದೂರುಗಳು ಕೇಳಿಬರುತ್ತಿರುವ ಕಾರಣ ಅಂತಹ ಕಸಾಯಿಖಾನೆಗಳಿದ್ದರೆ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಶಾಸಕರು ಇಲಾಖೆಗೆ ಸೂಚನೆ ನೀಡಿದ್ದಾರೆ. 

ಅಕ್ರಮವಾಗಿ ಗೋಸಾಗಾಟ ಮಾಡುವವ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಮೂಲಕ ಜಿಲ್ಲೆಯ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕಾರ್ಯೋನ್ಮುಖರಾಗಬೇಕು. ಜಿಲ್ಲೆಯಲ್ಲಿ ತರುವ ಕೃತ್ಯಗಳಿಗೆ ಆಸ್ಪದ ನೀಡಬಾರದು ಎಂದು ಶಾಸಕ ಕಾಮತ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು