7:55 AM Saturday18 - January 2025
ಬ್ರೇಕಿಂಗ್ ನ್ಯೂಸ್
ಜಾತಿಗಣತಿ ವರದಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡನೆ: ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ… ಸಂಭ್ರಮ- ಸಡಗರಕ್ಕೆ ಸಾಕ್ಷಿಯಾದ ಕಡಲನಗರಿಯ ಮಂಗಳಾ ಕ್ರೀಡಾಂಗಣ: 4500 ಕ್ರೀಡಾಪಟುಗಳ ಪಾದಸ್ಪರ್ಶ ಎಷ್ಟಾದರೂ ಹಣ-ಸವಲತ್ತು ಕೇಳಿ ಕೊಡ್ತೀನಿ, ಆದರೆ ಒಲಂಪಿಕ್ ಮೆಡಲ್ ತನ್ನಿ: ಮಂಗಳೂರಿನಲ್ಲಿ ಸಿಎಂ… ಮಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಸಿಎಂ ಸಿದ್ದರಾಮಯ್ಯ… ಮಂಗಳೂರಿಗೆ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ: ರಾಜೀವ್ ಗಾಂಧಿ ವಿವಿ ಪ್ರಾದೇಶಿಕ ಕೇಂದ್ರಕ್ಕೆ ಶಿಲಾನ್ಯಾಸ ಕುರ್ಚಿಗಾಗಿ ಕಾದಾಟದಲ್ಲೇ ಎಲ್ಲರೂ ಮಗ್ನ, ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆ: ಪ್ರತಿಪಕ್ಷ… ಕೆಎಎಸ್‌ ಪೂರ್ವಭಾವಿ ಮರುಪರೀಕ್ಷೆಯ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್… ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ 6 ಬಾರಿ ಚಾಕು ಇರಿತ: ಮುಂಜಾನೆ… ಗರೋಡಿ ಜಾತ್ರೆಗೂ ಊರವರಿಗೆ ನೀರಿಲ್ಲ!: 5 ದಿನಗಳಿಂದ ನೋ ವಾಟರ್!!; ಮೇಯರ್ ಅವರೇ… ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ…

ಇತ್ತೀಚಿನ ಸುದ್ದಿ

ಕಾರ್ಕಳ: ಅಕ್ರಮ ಜಾನುವಾರು ಸಾಗಾಟ; ಓರ್ವನ ಬಂಧನ, ಮತ್ತೊಬ್ಬ ಪರಾರಿ

04/07/2022, 21:18

ಕಾರ್ಕಳ(reporterkarnataka.com): ಜಾನುವಾರುಗಳನ್ನು ಅತ್ಯಂತ ಕ್ರೂರವಾಗಿ ಸ್ವಿಫ್ಟ್ ಕಾರಿನಲ್ಲಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಬ್ರಿ ಪೊಲೀಸರು ಒಬ್ಬನನ್ನು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ.

ದನ ಸಾಗಿಸುತ್ತಿದ್ದ ಕಾರನ್ನು ಹೆಬ್ರಿ ಪೋಲೀಸರು ಬೆನ್ನಟ್ಟಿ ಚಾರ ಗ್ರಾಮದ ನವೋದಯ ಶಾಲೆ ಬಳಿ ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಶಕಿಲ್ ಅಹಮದ್ ಟಿ.ಕೆ. ಎಂದು ಗುರುತಿಸಲಾಗಿದೆ. ಜಾನುವಾರುಗಳ ಕೈಕಾಲು ಕಟ್ಟಿ ಅತ್ಯಂತ ಕ್ರೂರವಾಗಿ ಕಾರಿನಲ್ಲಿ ತುಂಬಿಸಿ ಕಸಾಯಿಖಾನೆಗೆ ಸಾಗಿಸಲಾಗುತ್ತಿತ್ತು.

ಹೆಬ್ರಿ ಪೊಲೀಸರು ಖಚಿತ ಮಾಹಿತಿಯ ಮೇರೆಗೆ ಭಾನುವಾರ ರಾತ್ರಿ ಪೊಲೀಸರು ಚಾರ ನವೋದಯ ಶಾಲೆಯ ಬಳಿ ವಾಹನ ತಪಾಸಣೆ ನಡೆಸುತ್ತಿದ್ದಾಗ, ರಾತ್ರಿ ೮.೩೦ರ ವೇಳೆಗೆ ಬೇಳಂಜೆ ಕಡೆಯಿಂದ ಬಂದ ಸ್ವಿಫ್ಟ್ ಕಾರನ್ನು ನಿಲ್ಲಿಸುವಂತೆ ಪೊಲೀಸರು ಸೂಚನೆ ನೀಡಿದರೂ ಕಾರಿನಲ್ಲಿದ್ದವರು ಕಾರನ್ನು ನಿಲ್ಲಿಸದೆ ಹೆಬ್ರಿ ಕಡೆಗೆ ವೇಗವಾಗಿ ಚಲಾಯಿಸಿದ್ದಾರೆ. ಇದರಿಂದ ಅನುಮಾನಗೊಂಡ ಪೊಲೀಸರು ಕಾರನ್ನು ಬೆನ್ನಟ್ಟಿದಾಗ ಕಾರಿನವನು ಚಾರ ಸರ್ಕಲ್‌ನಿಂದ ಬ್ರಹ್ಮಾವರ ರಸ್ತೆಗೆ ಹೋಗಿ ಮಂಡಾಡಿಜೆಡ್ಡು ಕೆರೆಬೆಟ್ಟು ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿ ಕಾರನ್ನು ನಿಲ್ಲಿಸಿ ಕಾರಿನಿಂದಿಳಿದು ಪರಾರಿಯಾಗಲು ಯತ್ನಿಸಿದಾಗ ಪೊಲೀಸರು ಶಖಿಲ್ ಅಹಮದ್ ಟಿ.ಕೆ ಎಂಬವನನ್ನು ಹಿಡಿದಿದ್ದಾರೆ, ಇನ್ನೋರ್ವ ಆರೋಪಿ ಪರಾರಿಯಾಗಿದ್ದಾನೆ. ಬಂಧಿತನನ್ನು ಪೊಲೀಸರು ವಿಚಾರಣೆಗೊಳಪಡಿಸಿದಾಗ ಬೇಳಂಜೆ ಗ್ರಾಮದ ಈಸರಗದ್ದೆ ಎಂಬಲ್ಲಿದ ದನಗಳನ್ನು ಕಳವು ಮಾಡಿಕೊಂಡು ಕಸಾಯಿಖಾನೆಗೆ ಸಾಗಿಸುತ್ತಿರುವುದಾಗಿ ಹೇಳಿದ್ದಾನೆ. ಜಾನುವಾರುಗಳನ್ನು ಹಿಂಸಾತ್ಮಕವಾಗಿ ಕಾರಿನಲ್ಲಿ ತುಂಬಿಸಿದ್ದರದ ಒಂದು ಜಾನುವಾರು ಕಾರಿನಲ್ಲೇ ಮೃತಪಟ್ಟಿತ್ತು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು