7:59 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಪರ್ಕಳ: ರಸ್ತೆ ಬದಿಯ ಮನೆಗೆ ಉರುಳಿ ಬಿದ್ದ ಭಾರಿ ಗಾತ್ರದ ಕಂಟೈನರ್; ಚಾಲಕ‌ ಅಪಾಯದಿಂದ ಪಾರು

04/07/2022, 21:35

ಮಣಿಪಾಲ(reporterkarnataka.com): ಪರ್ಕಳದಿಂದ ಗೋವಾ ಕಡೆಗೆ ಸಾಗುತ್ತಿದ್ದ ಭಾರಿ ಗಾತ್ರದ ಕಂಟೈನರ್ ಲಾರಿಯೊಂದು ಕೆಳಪರ್ಕಳದ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮನೆಯೊಂದಕ್ಕೆ ಉರುಳಿ ಬಿದ್ದ ಘಟನೆ ನಡೆದಿದೆ.

ಕಾಂಕ್ರಿಟ್ ರಸ್ತೆಯಿಂದ ಡಾಮಾರು ರಸ್ತೆಗೆ ಸಂಪರ್ಕ ಸಾಧಿಸುವ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ಮನೆಗೆ ಉರುಳಿಬಿದ್ದದೆ.

ಭಾನುವಾರ ರಾತ್ರಿ ಪರ್ಕಳದಿಂದ ಗೋವಾ ಕಡೆಗೆ ರದ್ದಿ ಪೇಪರ್ ತೆಗೆದುಕೊಂಡು ಹೋಗುತ್ತಿದ್ದ ಕಂಟೈನರ್ ಪರ್ಕಳದ ಶೆಣೈ ಕಂಪೌಂಡ್ ಮೇಲೆ ಮಗುಚಿ ಬಿದ್ದಿದೆ. ಚಾಲಕ ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ.

ಸದ್ಯ ಈ ಮನೆಯಲ್ಲಿ ಯಾರು ವಾಸು ಮಾಡುತ್ತಿಲ್ಲ. ಹೀಗಾಗಿ ಹೆಚ್ಚಿನ ಅನಾಹುತ ಸಂಭವಿಸಿಲ್ಲ.

ಈ ಭಾಗದಲ್ಲಿ ಸೂಕ್ತ ದಾರಿದೀಪ, ನಾಮ ಫಲಕದ ವ್ಯವಸ್ಥೆ ಇಲ್ಲ. ಹೀಗಾಗಿ ಈ ಸ್ಥಳದಲ್ಲಿ ಪದೇ ಪದೇ ಅಪಘಾತ ನಡೆಯುತ್ತಿದೆ‌. ಈ ಹಿಂದೆಯೂ ಇದೇ ಸ್ಥಳದಲ್ಲಿ ಟ್ಯಾಂಕರ್, ಲಾರಿ ಉರುಳಿಬಿದ್ದಿತ್ತು. ಹಾಗಾಗಿ ಕೂಡಲೇ ದಾರಿ ದೀಪದ ವ್ಯವಸ್ಥೆ ಮಾಡಬೇಕು. ತಿರುವು ಇರುವ ಬಗ್ಗೆ ಸೂಚನೆ ನೀಡುವ ನಾಮಫಲಕ ಅಳವಡಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು