12:48 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಮಹಾರಾಷ್ಟ್ರ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ: ಮುಖ್ಯಮಂತ್ರಿ ಏಕನಾಥ್ ಶಿಂಧೆಗೆ ಬಹುಮತ ಪ್ರಾಪ್ತಿ

04/07/2022, 21:43

ಮುಂಬೈ(reporterkarnataka.com): ಬಿಜೆಪಿ ಬೆಂಬಲದೊಂದಿಗೆ ನೂತನವಾಗಿ ಅಸ್ತಿತ್ವಕ್ಕೆ ಬಂದ
ಏಕನಾಥ್ ಶಿಂಧೆ ನೇತೃತ್ವದ ಸರಕಾರ ಇಂದು ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿದೆ.

ಶಿಂಧೆ ಅವರು164 ಮತಗಳಿಂದ ವಿಶ್ವಾಸಮತ ಪರೀಕ್ಷೆಯಲ್ಲಿ ಗೆದ್ದು ಸದನದಲ್ಲಿ ತನ್ನ ಬಹುಮತ.ಸಾಬೀತುಪಡಿಸಿದರು.ಹೊಸದಾಗಿ ಪ್ರಮಾಣ ವಚನ ಸ್ವೀಕರಿಸಿದ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಇತರ 39 ಶಾಸಕರೊಂದಿಗೆ ತಮ್ಮ ಪಕ್ಷವಾದ ಶಿವಸೇನೆ ವಿರುದ್ಧ ಬಂಡಾಯವೆದ್ದು ಬಿಜೆಪಿ ಜತೆ ಕೈ ಜೋಡಿಸಿದ್ದರು. ಸದನದಲ್ಲಿ  ಬಹುಮತ ವೇಳೆ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಮತ್ತು ಆಲ್ ಇಂಡಿಯಾ ಮಜ್ಲಿಸೆ ಇ ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮತದಾನದಿಂದ ಹೊರಗುಳಿದಿದ್ದು, ಮಹಾ ವಿಕಾಸ್ ಅಘಾಡಿ ಮೈತ್ರಿಕೂಟದ ಎಂಟು ಶಾಸಕರು ಈ ವೇಳೆ  ಗೈರಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು