9:35 PM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಗೃಹ ಸಚಿವರ ಸೂಚನೆ: ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ 518 ವಿದೇಶಿ ಪ್ರಜೆಗಳು ಪೊಲೀಸ್ ವಶಕ್ಕೆ

05/07/2022, 09:12

ಮಂಗಳೂರು(reporterkarnataka.com): ನಗರದಲ್ಲಿ ಅಕ್ರಮವಾಗಿ ನೆಲೆಸಿರುವ 518 ವಿದೇಶಿ ಪ್ರಜೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಡಲನಗರಿಯಲ್ಲಿ ವಿದೇಶಿ ಪ್ರಜೆಗಳನ್ನು ಪತ್ತೆ ಹಚ್ಚುವ ಕಾರ್ಯ ಭರದಿಂದ ನಡೆದಿದ್ದು,ಕಳೆದ ಒಂದು ವಾರದಲ್ಲಿ 4 ಸಾವಿರ ಮಂದಿಯ ದಾಖಲೆ ಪರಿಶೀಲಿಸಲಾಗಿದೆ. ಈ ಪೈಕಿ ಸೂಕ್ತ ದಾಖಲೆಗಳಿಲ್ಲದೆ ವಾಸಿಸುತ್ತಿದ್ದ 518 ಮಂದಿ ವಲಸೆ ಕಾರ್ಮಿಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸೋಮವಾರ ನಗರದ ರೊಸಾರಿಯೊ ಶಾಲೆಯ ಸಭಾಂಗಣದಲ್ಲಿ ಪೊಲೀಸರು ಬೆಳಗ್ಗಿನಿಂದಲೇ ಪ್ರತಿಯೊಬ್ಬ ವಲಸೆ ಕಾರ್ಮಿಕರ ದಾಖಲೆ ಪರಿಶೀಲನೆ ಕಾರ್ಯ ನಡೆಸಿದ್ದಾರೆ.

ನಗರದಲ್ಲಿ ಬಾಂಗ್ಲಾ ಮತ್ತಿತರ ದೇಶಗಳ ಕಾರ್ಮಿಕರು ಅಕ್ರಮವಾಗಿ ನೆಲೆಸಿರುವ ಸಾಧ್ಯತೆ ಹಿನ್ನೆಲೆಯಲ್ಲಿ ಅವರನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ಈ ದಾಖಲೆ ಪರಿಶೀಲನೆ ಕಾರ್ಯ ನಡೆದಿದೆ.

ಈ ಸಂದರ್ಭ ಮಾತನಾಡಿದ ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ನಗರದ ಎಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆಸಲಾದ ಕಾರ್ಯಾಚರಣೆಯ ವೇಳೆ 4000 ಮಂದಿಯ ದಾಖಲೆ ಪರಿಶೀಲನೆ ನಡೆಸಲಾಗಿದೆ. ಅವರಲ್ಲಿ ಸರಿಯಾದ ದಾಖಲೆಗಳಿಲ್ಲದೆ, ಅನುಮಾನಸ್ಪದ ರೀತಿಯಲ್ಲಿ ಕಂಡು ಬಂದವರನ್ನು ವಿಚಾರಣೆಗೊಳಪಡಿಸಲಾಗಿದೆ ಎಂದರು.

ಗೃಹ ಸಚಿವರು ಇತ್ತೀಚೆಗೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಪರಿಶೀಲನಾ ಸಭೆಯ ಸಂದರ್ಭ ನೀಡಿದ ಆದೇಶದಂತೆ ಅಕ್ರಮ ವಲಸಿಗರನ್ನು ಪತ್ತೆ ಹಚ್ಚುವ ಕಾರ್ಯ ಸಾಗಿದೆ. ಪ್ರತಿಯೊಬ್ಬ ವಲಸೆ ಕಾರ್ಮಿಕರ ಮೇಲೂ ವಿಶೇಷ ನಿಗಾ ಇಡಲಾಗಿದೆ ಎಂದರು.

ಮುಖ್ಯವಾಗಿ ಚುನಾವಣಾ ಗುರುತಿನ ಚೀಟಿ, ಆಧಾರ್‌ಕಾರ್ಡ್‌ಗಳ ಪರಿಶೀಲನೆ ನಡೆಯುತ್ತಿದೆ. ಆದರೆ ಅವುಗಳನ್ನು ಕೂಡಾ ನಕಲಿಯಾಗಿ ಮಾಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಅದನ್ನು ಖಾತ್ರಿ ಪಡಿಸುವ ನಿಟ್ಟಿನಲ್ಲಿಯೂ ಮೊಬೈಲ್ ನಂಬರಗಳ ಮೂಲಕ ಅವರ ಪರಿಶೀಲನೆ ನಡೆಸಲಾಗುತ್ತಿದೆ. 20ಕ್ಕೂ ಅಧಿಕ ವಿಷಯಗಳ ಮೇಲೆ ಸಮಗ್ರ ವಿಚಾರಣೆ ನಡೆಸಲಾಗುತ್ತಿದೆ ಎಂದವರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು