ಇತ್ತೀಚಿನ ಸುದ್ದಿ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಅವ್ಯಾಹತ ಮಳೆ:ಶೃಂಗೇರಿ, ಕಳಸ, ಬಾಳೂರು ಶಾಲೆಗಳಿಗೆ 2 ದಿನ ರಜೆ
05/07/2022, 09:33

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@,gmail.com
ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಅವ್ಯಾಹತವಾಗಿ ಮಳೆ ಸುರಿಯುತ್ತಿದ್ದು, ಕೆಲವು ತಾಲೂಕಿನ ಶಾಲೆಗಳಿಗೆ ರಜೆ ಸಾರಲಾಗಿದೆ.
ಶೃಂಗೇರಿ, ಕಳಸ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿ ವ್ಯಾಪ್ತಿಯ ಶಾಲೆಗಳಿಗೂ
ರಜೆ ಸಾರಲಾಗಿದೆ. 1ರಿಂದ 10ನೇ
ತರಗತಿವರೆಗೂ ರಜೆ ಘೋಷಣೆ.
ಜುಲೈ 5 ಹಾಗೂ ಜುಲೈ 6ರಂದು ರಜೆ ಘೋಷಿಸಿ ಡ
ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಆದೇಶ ಹೊರಡಿಸಿದ್ದಾರೆ.
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಹಳ್ಳ ಕೊಳ್ಳಗಳು. ಮುಂಜಾಗ್ರತ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.