ಇತ್ತೀಚಿನ ಸುದ್ದಿ
ಮೂಡಿಗೆರೆ: ಕಾರಿನ ಮೇಲೆ ಬಿದ್ದ ಬೃಹದಾಕಾರದ ಮರ: ಅದೃಷ್ಟವಶಾತ್ ಪ್ರಯಾಣಿಕರು ಪಾರು
05/07/2022, 10:22
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಅವ್ಯಾಹತ ಮಳೆ ಮುಂದುವರಿದಿದೆ. ಮೂಡಿಗೆರೆಯ ಗಂಗನಮಕ್ಕಿ ಎಂಬಲ್ಲಿ ಭಾರಿ ಗಾತ್ರದ ಮರವೊಂದು ಕಾರಿನ ಮೇಲೆ ಬಿದ್ದಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಪಾರಾಗಿದ್ದಾರೆ.
ಮಲೆನಾಡು ಭಾಗದಲ್ಲಿ ಮುಂದುವರೆದ ಗಾಳಿ ಮಳೆಗೆ ಆಲ್ಟೋ ಕಾರ್ ಮೇಲೆ ಬೃಹದಾಕಾರದ ಮರ ಬಿದ್ದಿತ್ತು.ಅದೃಷ್ಟ ವಶಾತ್ ಕಾರಿನಲ್ಲಿವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನಲಿದ್ದವರು ಮೂಡಿಗೆರೆ ಮೂಲದವರು ಎಂದು ತಿಳಿದು ಬಂದಿದೆ.