8:23 AM Wednesday15 - January 2025
ಬ್ರೇಕಿಂಗ್ ನ್ಯೂಸ್
ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ… ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ… ವಿಜಯಪುರ: 4 ಮಂದಿ ಮಕ್ಕಳ ಜತೆ ಕಾಲುವೆಗೆ ಜಿಗಿದ ಹೆತ್ತಬ್ಬೆ: ಮಕ್ಕಳ ದಾರುಣ… ಹಸುಗಳ ಕೆಚ್ಚಲು ಕೊಯ್ದ ‘ವ್ಯಾಘ್ರ’ನ ಬಂಧನ: ಬಿಹಾರ ಮೂಲದ ದುಷ್ಟನಿಗೆ ನ್ಯಾಯಾಂಗ ಬಂಧನ ನಂಜನಗೂಡು: ಅಂಧಕಾಸುರ ಸಂಹಾರ ಧಾರ್ಮಿಕ ಆಚರಣೆ ನಿರ್ವಿಘ್ನವಾಗಿ ಮುಕ್ತಾಯ ಹಸುಗಳ ಕೆಚ್ಚಲು ಕೊಯ್ದ ದುರುಳರ ವಿರುದ್ಧ ಕಠಿಣ ಕ್ರಮ ಜರುಗಿಸಿ: ಕೇಂದ್ರ ಸಚಿವ… ಹಸುಗಳ ಕೆಚ್ಚಲು ಕೊಯ್ದು ಆರೋಪಿಗಳ ಪತ್ತೆ ಹಚ್ಚಿ ಶಿಕ್ಷೆಗೆ ಗುರಿಪಡಿಸಲಾಗುವುದು: ಸಿಎಂ ಸಿದ್ದರಾಮಯ್ಯ ನೈಸ್ ಯೋಜನೆಗೆ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ಎಲ್ಲಿ?: ರಾಜ್ಯ ಸರ್ಕಾರದ ವಿರುದ್ಧ…

ಇತ್ತೀಚಿನ ಸುದ್ದಿ

ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಕೊಲೆ

05/07/2022, 15:26

ಹುಬ್ಬಳ್ಳಿ (Reporterkarnataka.com)
ಹಾಡಹಗಲೇ ನಗರದ ಪ್ರಸಿಡೆಂಟ್​ ಹೋಟೆಲ್​ನಲ್ಲಿ ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಅವರನ್ನ ದುಷ್ಕರ್ಮಿಗಳಿಬ್ಬರು ಭೀಕರವಾಗಿ ಹತ್ಯೆ ಮಾಡಿದ್ದು, ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ.

ವಾಸ್ತು ಗುರೂಜಿ ಅವರ ಕೊನೆಗೂ ಮುನ್ನ ಹಂತಕರಿಬ್ಬರು ನಡೆಸಿದ ಹೈಡ್ರಾಮವೂ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮಂಗಳವಾರ ಬೆಳಗ್ಗೆ ಪ್ರಸಿಡೆಂಟ್​ ಹೋಟೆಲ್​ನ ರಿಸೆಪ್ಶನ್​ನಲ್ಲಿ ಭಕ್ತರ ಸೋಗಿನಲ್ಲಿ ಯುವಕರಿಬ್ಬರು ಕುಳಿತಿದ್ದರು. ಚಂದ್ರಶೇಖರ ಗುರೂಜಿ ಅವರು ಆಗಮಿಸುತ್ತಿದ್ದಂತೆ ಎದ್ದು ಯುವಕರಿಬ್ಬರು ನಿಂತರು. ಗುರೂಜಿ ಅವರು ಖುರ್ಚಿಯಲ್ಲಿ ಕುಳಿತುಕೊಳ್ಳುತ್ತಿದ್ದಂತೆ ಇಬ್ಬರೂ ಸಮೀಪಕ್ಕೆ ಆಗಮಿಸಿದ್ದಾರೆ. ಒಬ್ಬ ಗುರೂಜಿ ಅವರ ಕಾಲು ಮುಟ್ಟಿ ನಮಸ್ಕರಿಸಿ ಮೇಲಕ್ಕೆ ಏಳುತ್ತಿದ್ದಂತೆ ಪಕ್ಕದಲ್ಲೇ ಇದ್ದ ಮತ್ತೊಬ್ಬ ಗುರೂಜಿಗೆ ಚಾಕುವಿನಿಂದ ಇರಿದಿದ್ದಾನೆ. ಏನಾಗ್ತಿದೆ ಎಂದು ಅರಿಯುವಷ್ಟರಲ್ಲಿ ಇಬ್ಬರೂ ಗುರೂಜಿಯನ್ನ ರಿಸೆಪ್ಶನ್​ನಲ್ಲೇ ಅಟ್ಟಾಡಿಸಿಕೊಂಡು 60ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಕೊಂದಿದ್ದಾರೆ. ಬಳಿಕ ಚಾಕು ಹಿಡಿದುಕೊಂಡೇ ಹೋಟೆಲ್​ನಿಂದ ಹೊರ ಓಡಿದ್ದಾರೆ. ಈ ವೇಳೆ ಸ್ಥಳದಲ್ಲೇ ಇದ್ದ ಕೆಲವರು ಭಯದಿಂದ ದೂರ ಓಡಿದ್ದಾರೆ.

ಹೋಟೆಲ್‌ ಸಿಬ್ಬಂದಿ ಹಾಗೂ ಸಾರ್ವಜನಿಕರು ಬಿಡಿಸಿಕೊಳ್ಳಲು ಬಂದರೂ ಅವರಿಗೂ ಬೆದರಿಸಿದ ಹಂತಕರು, ಸ್ಥಳದಲ್ಲೇ ಮೃತಪಡುವವರೆಗೂ ಗುರೂಜಿಗೆ ಚುಚ್ಚಿ ಚುಚ್ಚಿ ಕೊಂದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಎರಡು ದಿನಗಳಿಂದ ಚಂದ್ರಶೇಖರ ಗುರೂಜಿ ಅವರು ಹುಬ್ಬಳ್ಳಿಯ ಉಣಕಲ್​ನ ಪ್ರೆಸಿಡೆಂಟ್ ಹೋಟೆಲ್‌ನಲ್ಲಿ ತಂಗಿದ್ದರು. ಇಂದು ಮಧ್ಯಾಹ್ನ 12 ಗಂಟೆ ಸುಮಾರಿನಲ್ಲಿ ಭಕ್ತರ ಸೋಗಿನಲ್ಲಿ ಯುವಕರಿಬ್ಬರು ಗುರೂಜಿ ಅವರನ್ನ ಭೇಟಿಯಾಗಲು ಬಂದಿದ್ದರು. ಅವರೇ ಗುರೂಜಿಯನ್ನ ಕೊಂದಿದ್ದಾರೆ. ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಶ್ವಾನವೊಂದು ಹಂತಕರ ಜಾಡು ಹಿಡಿದು ಹೊರಟಿರುವುದು ಭಾರೀ ಕುತೂಹಲ ಮೂಡಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು