1:29 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕೊಲ್ಕತ್ತಾ : ಹಸೆ ಮಣೆಗೇರಿದ ಸಲಿಂಗಕಾಮಿ ಜೋಡಿ

05/07/2022, 15:43

ಕೊಲ್ಕತ್ತಾ (Reporterkarnataka.com)
ಸಲಿಂಗಕಾಮಿ ಜೋಡಿ ವಿವಾಹವಾಗಿ ತಮ್ಮ ಸಂಬಂಧವನ್ನು ಅಧಿಕೃತಗೊಳಿಸಿದ ಪ್ರಸಂಗ ಕೊಲ್ಕತ್ತಾದಲ್ಲಿ ನಡೆದಿದೆ.

ವಿವಾಹ ಸಮಾರಂಭದಲ್ಲಿ ಸ್ನೇಹಿತರು ಮತ್ತು ಕುಟುಂಬ ಸದಸ್ಯರು ಭಾಗವಹಿಸಿದ್ದರು. ಅಭಿಷೇಕ್​ ರೇ ಮತ್ತು ಚೈತನ್ಯ ಶರ್ಮಾ ವಿವಾಹವಾದವರು.

ದಂಪತಿ ಅರಿಷಿಣ ಶಾಸ್ತ್ರ ಮತ್ತು ವಿವಾಹ ಸಮಾರಂಭಗಳ ಚಿತ್ರಗಳು ಮತ್ತು ವಿಡಿಯೊಗಳನ್ನು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಳ್ಳಲಾಗಿದೆ. ಅಭಿಷೇಕ್​ ಧೋತಿ ಮತ್ತು ಕುರ್ತಾದಲ್ಲಿ ಸಾಂಪ್ರದಾಯಿಕ ಬಂಗಾಳಿ ವರನಂತೆ ಕಾಣಿಸಿಕೊಂಡರೆ, ಚೈತನ್ಯ ಶೆರ್ವಾನಿ ಧರಿಸಿದ್ದರು. ಸಮಾರಂಭದಲ್ಲಿ ಖುಷಿ, ಸಂಭ್ರಮ ಎದ್ದು ಕಾಣಿಸಿದೆ. ಕುಟುಂಬಸ್ಥರು, ಸ್ನೇಹಿತರು ಸಡಗರದಲ್ಲಿರುವುದೂ ಸಹ ಫೋಟೋದಲ್ಲಿ ಕಾಣಿಸಿದೆ.

ಕಳೆದ ವರ್ಷ ಡಿಸೆಂಬರ್​ನಲ್ಲಿ, ಸಲಿಂಗಕಾಮಿ ದಂಪತಿ ಹೈದರಾಬಾದ್​ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸುಪ್ರಿಯೋ ಚಕ್ರವರ್ತಿ ಮತ್ತು ಅಭಯ್​ ದಂಗ್​ ಹೈದ್ರಾಬಾದ್​ನ ಹೊರವಲಯದಲ್ಲಿರುವ ರೆಸಾರ್ಟ್​ನಲ್ಲಿ ಉಂಗುರ ಬದಲಾಯಿಸಿಕೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು