ಇತ್ತೀಚಿನ ಸುದ್ದಿ
ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗಲು ಕನಿಷ್ಠ ಶೇ. 75 ರಷ್ಟು ಹಾಜರಾತಿ ಕಡ್ಡಾಯ: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಆದೇಶ
06/07/2022, 10:05
ಸಾಂದರ್ಭಿಕ ಚಿತ್ರ
ಬೆಂಗಳೂರು(reporterkarnataka.com): ಕೋವಿಡ್ ಸಮಯದಲ್ಲಿ ತರಗತಿಗಳು ಸರಿಯಾಗಿ ನಡೆಯದ ಕಾರಣ ಪರೀಕ್ಷೆ ಬರೆಯಲು ಕನಿಷ್ಠ ಹಾಜರಾತಿ ವಿನಾಯಿತಿ ನೀಡಲಾಗಿತ್ತು.
ಆದರೆ ಈಗ 2022-23 ನೇ ಸಾಲಿನ, ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ಕನಿಷ್ಠ ಶೇ. 75 ರಷ್ಟು ಹಾಜರಾತಿ ಕಡ್ಡಾಯ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಆದೇಶ ನೀಡಿದೆ.














