7:35 AM Sunday14 - September 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ

ಇತ್ತೀಚಿನ ಸುದ್ದಿ

ತೆರಿಗೆ ವಂಚನೆ, ದೇಶದ ಗೌಪ್ಯ ಮಾಹಿತಿ ಸೋರಿಕೆ: ಚೀನಾದ ಕಂಪನಿಗಳ ಮೇಲೆ ಇಡಿ ದಾಳಿ

06/07/2022, 12:11

ಹೊಸದಿಲ್ಲಿ(reporterkarnataka.com): ತೆರಿಗೆ ವಂಚನೆ ತನಿಖೆಯ ಭಾಗವಾಗಿ ದೇಶದಲ್ಲಿನ ಚೀನಾದ ಟೆಲಿಕಾಂ ಕಂಪನಿಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ ಬೆನ್ನೆಲ್ಲೇ ಇದೀಗ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ.

ತೆರಿಗೆ ವಂಚನೆ ಮತ್ತು ದೇಶದ ಗೌಪ್ಯ ವಿಚಾರಗಳನ್ನು ಸೋರಿಕೆ ಮಾಡುತ್ತಿರುವ ಆರೋಪದ ಮೇಲೆ ಚೀನಾಗೆ ಸಂಬಂಧಿಸಿದ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಉತ್ತರಪ್ರದೇಶ, ಮಧ್ಯಪ್ರದೇಶ, ಬಿಹಾರ ಸೇರಿದಂತೆ ದಕ್ಷಿಣದ ಹಲವು ರಾಜ್ಯಗಳಲ್ಲಿನ ಚೀನಾ ಕಂಪನಿಗಳ ಮೇಲೆ ರೈಡ್​ ನಡೆಸಿ ಪರಿಶೀಲನೆಗೆ ಒಳಪಡಿಸಲಾಗಿದೆ.

ಕೋಟ್ಯಂತರ ರೂಪಾಯಿ ವಹಿವಾಟು ನಡೆಸುತ್ತಿರುವ ಚೀನಾ ಮೂಲದ ಟೆಲಿಕಾಂ ಕಂಪನಿಗಳ ಆದಾಯ ವಿವರ ಸಲ್ಲಿಕೆಯಲ್ಲಿ ಲೋಪದೋಷಗಳು ಕಂಡು ಬಂದಿರುವ ಆರೋಪದ ಮೇಲೆ ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳ ಮೂಲಕ ಬಿಸಿ ಮುಟ್ಟಿಸಿದೆ.

ಕಳೆದ ಕೆಲ ವರ್ಷಗಳಿಂದ ಚೀನಿ ಮೂಲದ ಮೊಬೈಲ್​ ಕಂಪನಿಗಳು ಸಾವಿರಾರು ಕೋಟಿ ರೂಪಾಯಿ ಆದಾಯ ಗಳಿಸುತ್ತಿದ್ದರೂ, ನಷ್ಟವನ್ನು ತೋರಿಸುತ್ತಿವೆ. ಇದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಆದಾಯ ತೆರಿಗೆಯಿಂದ ನುಣುಚಿಕೊಳ್ಳಲು ಕಂಪನಿಗಳ ಈ ರೀತಿ ಮೋಸ ಮಾಡುತ್ತಿವೆ ಎಂಬ ಅನುಮಾನದ ಮೇಲೆ ತನಿಖೆಗೆ ಸೂಚಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು