7:33 AM Monday17 - November 2025
ಬ್ರೇಕಿಂಗ್ ನ್ಯೂಸ್
ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ…

ಇತ್ತೀಚಿನ ಸುದ್ದಿ

ಶಾಸಕದ್ವಯರ ರಾಜಕೀಯ ಒತ್ತಡದಿಂದ ಎಎಸ್ಪಿ ವರ್ಗಾವಣೆ: ಮಾಜಿ ಸಚಿವ ರಮಾನಾಥ  ರೈ ಆರೋಪ

07/07/2022, 16:45

ಬಂಟ್ವಾಳ(reporterkarnataka.com):  ಬಂಟ್ವಾಳ ಹಾಗೂ ಬೆಳ್ತಂಗಡಿ ಶಾಸಕರ ಬೆಂಬಲದಿಂದ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆ, ಮರಳು ದಂಧೆ, ಜುಗಾರಿ ದಂಧೆಗಳಿಗೆ ಕಡಿವಾಣ ಹಾಕುತ್ತಿದ್ದ ಎಎಸ್ಪಿ ಶಿವಾಂಶು ರಜಪೂತ್ ಅವರನ್ನು ರಾಜಕೀಯ ಒತ್ತಡದಿಂದ ವರ್ಗಾವಣೆ ಮಾಡಲಾಗಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಆರೋಪಿಸಿದ್ದಾರೆ.

ಬಿ.ಸಿ.ರೋಡ್‌ನ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು “ಇದೊಂದು ರಾಜಕೀಯ ಪ್ರೇರಿತ ವರ್ಗಾವಣೆ, ಒಳ್ಳೆಯ ಕೆಲಸ ಮಾಡುತ್ತಿದ್ದ ಅಧಿಕಾರಿಯನ್ನು ಹಠಾತ್ತಾಗಿ ವರ್ಗಾವಣೆ ಮಾಡಿದ್ದಾರೆ, ನಿರಂತರವಾಗಿ ಅಕ್ರಮ ಮರಳುಗಾರಿಕೆ ಕ್ಷೇತ್ರದಲ್ಲಿ ನಡೆಯುತ್ತಿದ್ದು,

ಅನಂತಾಡಿಯಲ್ಲಿ ಗಣಿಗಾರಿಕೆಯಿಂದ ಗುಹಾತೀರ್ಥಕ್ಕೆ ತೊಂದರೆ ಆಗುತ್ತಿದೆ ಎಂಬ ಆರೋಪವನ್ನು ಮಾಡಿ ಪ್ರತಿಭಟನೆಯನ್ನು ಮಾಡಿದ್ದೆವು ಎಂದು ನೆನಪಿಸಿದ ಅವರು ಬಿಜೆಪಿಯವರು ಬೇರೆಯವರಿಗೆ ಬುದ್ಧಿವಾದ ಹೇಳುತ್ತಾರೆ. ಆದರೆ ಅವರಿಗೆ ಬುದ್ಧಿ ಹೇಳಬೇಕಾದವರು ಜನರು ಎಂದರು.

ಒಂದು ಲೋಡ್ ಮರಳಿಗೆ 15 ಸಾವಿರ ರೂ. ಕೊಡಬೇಕಾದ ಪರಿಸ್ಥಿತಿ ಇದೆ, ಮನೆ ಕಟ್ಟುವವರು ಸಂಕಷ್ಟ ಪಡುತ್ತಿದ್ದಾರೆ. ತಾಲೂಕಿನ ಒಂದು ಕಡೆ ಪರವಾನಗಿ ತೆಗೆದುಕೊಂಡವರು ಎಲ್ಲ ಕಡೆಗಳಲ್ಲೂ ಮರಳುಗಾರಿಕೆ ಮಾಡುತ್ತಾರೆ ಎಂದು ರೈ ಆರೋಪಿಸಿದರು.

ಜೂಜು ಅಡ್ಡೆಯ ಬಳಿಯೇ ಕೊಲೆ ಯತ್ನ ಪ್ರಕರಣ, ಹಲ್ಲೆಗಳು ನಡೆದದ್ದು ವರದಿಯಾಗಿವೆ. ಹೆಣ್ಣುಮಕ್ಕಳ ಕರಿಮಣಿ ಅಡವಿಟ್ಟು ಜುಗಾರಿ ದಂಧೆಯಲ್ಲಿ ತೊಡಗಿಸಿಕೊಂಡವರಿದ್ದಾರೆ. ಮರಳುಗಾರಿಕೆಯ ಪಕ್ಕದ ರಸ್ತೆಗಳು ಸಂಪೂರ್ಣ ಹದಗೆಟ್ಟಿವೆ,ಈ ಭಾಗದ ಬೆಳ್ತಂಗಡಿ ಮತ್ತು ಬಂಟ್ವಾಳದ ಇಬ್ಬರೂ ಶಾಸಕರ ಬೆಂಬಲ ಇದೆ ಎಂದು ನಾನು ನೇರವಾಗಿ ಆರೋಪಿಸುತ್ತೇನೆ ಎಂದು ರೈ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು