2:50 PM Monday22 - September 2025
ಬ್ರೇಕಿಂಗ್ ನ್ಯೂಸ್
ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ…

ಇತ್ತೀಚಿನ ಸುದ್ದಿ

ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಕಾರು: ಇಬ್ಬರು ಯುವಕರ ಸಾವು; ಓರ್ವ ಪಾರು; ಕ್ರೇನ್ ಮೂಲಕ ಕಾರ್ಯಾಚರಣೆ

08/07/2022, 18:36

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ರಡ್ಡೇರಹಟ್ಟಿ ಗ್ರಾಮದಲ್ಲಿ ಚಾಲಕ ನಿಯಂತ್ರಣ ತಪ್ಪಿ ಕಾಲುವೆಗೆ ಕಾರು ಬಿದ್ದು ಇಬ್ಬರು ಮೃತಪಟ್ಟ ದಾರುಣ ಘಟನೆ ನಡೆದಿದೆ.


ಹಲ್ಯಾಳ ಏತ ನೀರಾವರಿ ಕಾಲುವೆಗೆ ಕಾರು ಬಿದ್ದಿದ್ದು, ಮೃತಪಟ್ಟವರನ್ನು ಮಹಾದೇವ ಚಿಗರಿ(26)  ಹಾಗೂ ಸುರೇಶ ಬಡಚಿ (27) ಎಂದು ಗುರುತಿಸಲಾಗಿದೆ. ಇಬ್ಬರು ಯುವಕರು ರಡ್ಡೇರಹಟ್ಟಿ ಗ್ರಾಮದವರು ಎಂದು ತಿಳಿದುಬಂದಿದೆ.

ಘಟನೆಯಲ್ಲಿ ಶ್ರೀಕಾಂತ ನಡುವಿನಮನಿ ಘಟನಟ್ಟಿ ಗ್ರಾಮದ ಯುವಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. MH 05 AB 6674 ನಂಬರ ಹೊಂದಿರುವ ಕಾರು ಅವಘಡದಲ್ಲಿ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. 


ಸ್ಥಳಕ್ಕೆ ಅಥಣಿ ಅಗ್ನಿಶಾಮಕ ದಳ ಹಾಗೂ ಪೊಲೀಸರ ಕಾರ್ಯಾಚರಣೆ ನಡೆದಿದ್ದು. ಕಾರು ಹಾಗೂ ಮೃತ ಯುವಕರನ್ನು ಹೊರ ತೆಗೆಯಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು