11:09 AM Monday28 - July 2025
ಬ್ರೇಕಿಂಗ್ ನ್ಯೂಸ್
ಗದಗ -ಬಂಕಾಪುರ ರಾಷ್ಟ್ರೀಯ ಹೆದ್ದಾರಿಗೆ ಗಡ್ಕರಿ ಭರವಸೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು… ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ… Mangaluru | ಸಂಸದ ತೇಜಸ್ವೀ ಸೂರ್ಯ ರಿಂದ ಲಾಲ್‌ಬಾಗ್‌ನಲ್ಲಿ ವೀಲ್‌ಚೇರ್ ಸ್ನೇಹಿ ಶೌಚಾಲಯ… Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;…

ಇತ್ತೀಚಿನ ಸುದ್ದಿ

ರಾಜ್ಯಸಭೆಯಲ್ಲಿ ಮೊಳಗಿದ ಕನ್ನಡ: ರಾಘವೇಂದ್ರ ಸ್ವಾಮಿ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ನಟ ಜಗ್ಗೇಶ್​ 

08/07/2022, 21:37

ಹೊಸದಿಲ್ಲಿ(reporterkarnataka.com): ರಾಜ್ಯಸಭೆಗೆ ಆಯ್ಕೆಯಾಗಿರುವ ಸ್ಯಾಂಡಲ್​ವುಡ್ ನಟ ಜಗ್ಗೇಶ್​ ಶುಕ್ರವಾರ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಅಚ್ಚಾ ಕನ್ನಡದಲ್ಲೇ ಜಗ್ಗೇಶ್​ ಪ್ರಮಾಣ ವಚನ ಸ್ವೀಕಾರ ಮಾಡಿದ್ದು ಎಲ್ಲರ ಗಮನ ಸೆಳೆದಿದ್ದಾರೆ.

ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿದ್ದ ಪೀಠದ ಸಮ್ಮುಖದಲ್ಲಿ ಗುರು ರಾಘವೇಂದ್ರರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿರುವ ಅವರು, ಅದರ ವಿಡಿಯೋ ತುಣಕವೊಂದನ್ನ ತಮ್ಮ ಟ್ವೀಟರ್​ ಅಕೌಂಟ್​ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಈ ವೇಳೆ, ರಾಜ್ಯಸಭೆಯಲ್ಲಿ ಶ್ರದ್ಧೆಯಿಂದ ಪ್ರಮಾಣವಚನ ಸ್ವೀಕಾರ ಮಾಡಿದ್ದೇನೆ. ಸಿರಿಗನ್ನಡದಲ್ಲಿ ರಾಯರ ಹೆಸರಲ್ಲಿ ಸ್ವೀಕರಿಸಿದ ನನ್ನ ಬದುಕಿನ ಶ್ರೇಷ್ಠಕ್ಷಣ.. ಹೃದಯಪೂರ್ವಕ ಧನ್ಯವಾದ ಎಂದು ಬರೆದುಕೊಂಡಿದ್ದಾರೆ.

ಪ್ರಧಾನಿ ಮೋದಿ, ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಕರ್ನಾಟಕ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್, ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್‌ ಕುಮಾರ್‌ ಅವರಿಗೆ ಹೃದಯಪೂರ್ವಕ ಧನ್ಯವಾದ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು