4:43 AM Sunday28 - June 2026
ಬ್ರೇಕಿಂಗ್ ನ್ಯೂಸ್
2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಸಾಲುಮರದ ತಿಮ್ಮಕ್ಕ ಪರಿಸರ ರಾಯಭಾರಿ: ರಾಜ್ಯ ಸಂಪುಟ ದರ್ಜೆಯ ಸ್ಥಾನಮಾನ

08/07/2022, 22:30

ಬೆಂಗಳೂರು(reporterkarnataka.com): ರಾಷ್ಟ್ರ ಮತ್ತು ರಾಜ್ಯ ಪ್ರಶಸ್ತಿ‌ ಪುರಸ್ಕೃತರಾದ ನಾಡೋಜ ಸಾಲುಮರದ ತಿಮ್ಮಕ್ಕ ಅವರನ್ನು ಪರಿಸರ ರಾಯಭಾರಿಯನ್ನಾಗಿ ನೇಮಿಸಲಾಗಿದ್ದು, ಅವರಿಗೆ ರಾಜ್ಯ ಸಚಿವ‌ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯದ ಉದ್ದಗಲಕ್ಕೂ ಪರಿಸರ ರಕ್ಷಣೆಯ ಕುರಿತು ಪ್ರಚಾರ ಮಾಡಲು ತಿಮ್ಮಕ್ಕ ಅವರಿಗೆ ಈ ಗೌರವವನ್ನು ಕಲ್ಪಿಸಲಾಗಿದೆ. ಅಲ್ಲದೆ, ಹೊರ ರಾಜ್ಯಕ್ಕೆ ತೆರಳಿದರೆ ಸರ್ಕಾರವೇ ಖರ್ಚು ಭರಿಸಲಿದೆ.

ಜೂ. 3ರಂದು ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಸಾಲುಮರದ ತಿಮ್ಮಕ್ಕನವರ 111ರ ಜನ್ಮದಿನದ ಸಂಭ್ರಮ ಹಾಗೂ ಸಾಲುಮರದ ತಿಮ್ಮಕ್ಕ ಗ್ರೀನರಿ ಅವಾರ್ಡ್ ಪ್ರದಾನ ಸಮಾರಂಭ ನಡೆದಿತ್ತು. ಅಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರಿಗೆ ಪರಿಸರ ರಾಯಭಾರಿ ಗೌರವ ನೀಡುವ ಜೊತೆಗೆ ಸಂಪುಟ ದರ್ಜೆ ಸ್ಥಾನಮಾನ ಕಲ್ಪಿಸಲಾಗುತ್ತದೆ ಎಂದು ಹೇಳಿಕೆ ನೀಡಿದ್ದರು.

ಸಿಎಂ ನುಡಿದಂತೆ ಇದೀಗ ಅಧಿಕೃತ ಆದೇಶ ಹೊರಡಿಸಲಾಗಿದೆ. ಅಲ್ಲದೇ ಬಿಡಿಎ ವತಿಯಿಂದ ತಿಮ್ಮಕ್ಕ ಅವರಿಗೆ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ 50*80 ಅಳತೆಯ ನಿವೇಶನವನ್ನು ಹಸ್ತಾಂತರಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು