1:31 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮುಂದಿನ 5 ವರ್ಷಗಳಲ್ಲಿ ಭಾರತದಲ್ಲಿ ಪೆಟ್ರೋಲ್ ನಿಷೇಧ?: ಕೇಂದ್ರ ಭೂ ಸಾರಿಗೆ ಸಚಿವ ಗಡ್ಕರಿ ಹೇಳಿದ್ದೇನು? 

09/07/2022, 09:57

ಹೊಸದಿಲ್ಲಿ(reporterkarnataka.com): ಇಂದಿನ ಬದಲಾವಣೆಯ ಹೊಸತನಕ್ಕೆ ಭಾರತವು ನಾನಾ ರೀತಿಯಲ್ಲಿ ಅಭಿವೃದ್ಧಿ ಆಗುತ್ತಿದ್ದು, ಎಲ್ಲಾ ಕ್ಷೇತ್ರದಲ್ಲೂ ಹೊಸ ಆವಿಷ್ಕಾರಗಳು ನಡೆಯುತ್ತಿದೆ.

ಅದೇ ರೀತಿ ಸಾರಿಗೆ ವಿಭಾಗದಲ್ಲೂ ಬದಲಾವಣೆಯಾಗುತ್ತಿದೆ. ಪ್ರಸುತ್ತ ಪರ್ಯಾಯ ಇಂಧನಗಳತ್ತ ಮುಖ ಮಾಡಿರುವ ಭಾರತ ಮುಂದಿನ 5 ವರ್ಷಗಳಲ್ಲಿ ಪೆಟ್ರೋಲ್ ಬಳಕೆ ನಿಷೇಧವಾಗಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಮಹಾರಾಷ್ಟ್ರದ ಅಕೋಲಾದಲ್ಲಿ ಡಾ.ಪಂಜಾಬ್ರಾವ್ ದೇಶಮುಖ್ ಕೃಷಿ ವಿದ್ಯಾಪೀಠದಿಂದ ಗಡ್ಕರಿ ಅವರಿಗೆ ಡಾಕ್ಟರ್ ಆಫ್ ಸೈನ್ಸ್ (ಡಿಎಸ್‌ಸಿ) ಗೌರವ ಪದವಿ ಪ್ರದಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ದೇಶದಲ್ಲಿ ಪರ್ಯಾಯ ಇಂಧನ ಬಳಕೆಯ ಮಹತ್ವದ ಕುರಿತು ಮಾತನಾಡಿದರು.

‘ಮಹಾರಾಷ್ಟ್ರದ ವಿದರ್ಭ ಜಿಲ್ಲೆಯಲ್ಲಿ ತಯಾರಾಗುತ್ತಿರುವ ಜೈವಿಕ ಎಥೆನಾಲ್ ಅನ್ನು ವಾಹನಗಳಲ್ಲಿ ಬಳಸಲಾಗುತ್ತಿದೆ. ಹಸಿರು ಹೈಡ್ರೋಜನ್ (ಹಸಿರು ಜಲಜನಕ) ತಯಾರಿಸಬಹುದು ಮತ್ತು ಇದನ್ನೂ ಕೆಜಿಗೆ 70 ರೂ.ಗೆ ಮಾರಾಟ ಮಾಡಬಹುದು. ಮುಂದಿನ ಐದು ವರ್ಷಗಳಲ್ಲಿ ದೇಶದಲ್ಲಿ ಪೆಟ್ರೋಲ್ ಖಾಲಿಯಾಗಲಿದ್ದು, ಇದರಿಂದಾಗಿ ದೇಶದಲ್ಲಿ ಪಳೆಯುಳಿಕೆ ಇಂಧನವನ್ನು ನಿಷೇಧಿಸಲಾಗುವುದು ಎಂದು ಹೇಳಿದ್ದಾರೆ.

ರೈತರು ಕೇವಲ ಆಹಾರ ಪೂರೈಕೆದಾರರಾಗದೆ ಇಂಧನ ಪೂರೈಕೆದಾರರಾಗುವ ಅಗತ್ಯವನ್ನು ಎತ್ತಿ ತೋರಿಸಿದರು. ಕೇವಲ ಗೋಧಿ, ಭತ್ತ, ಜೋಳ ಹಾಕುವುದರಿಂದ ಯಾವ ರೈತನೂ ತನ್ನ ಭವಿಷ್ಯವನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು