2:30 AM Sunday16 - November 2025
ಬ್ರೇಕಿಂಗ್ ನ್ಯೂಸ್
ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ…

ಇತ್ತೀಚಿನ ಸುದ್ದಿ

ದಕ್ಷಿಣ ಭಾರತದಲ್ಲಿ ಚುರುಕುಗೊಂಡ ಮಳೆ: ರಾಜ್ಯದಲ್ಲಿ ಇನ್ನಷ್ಟು ಬಿರುಸುಗೊಳ್ಳಲಿದೆ ವರ್ಷಧಾರೆ

09/07/2022, 22:42

ಬೆಂಗಳೂರು(reporterkarnataka.com):ಬದಲಾದ ಹವಾಮಾನದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ, ಕೇರಳದಲ್ಲಿ ಭಾರೀ ಮಳೆಯಾಗುತ್ತಿದ್ದು, ಕರ್ನಾಟಕದ ಕರಾವಳಿ, ಮಲೆನಾಡು ಭಾಗಗಳಲ್ಲಿ ಮಳೆ ಇನ್ನಷ್ಟು ಬಿರುಸು ಪಡೆದುಕೊಳ್ಳುವ ಸಾಧ್ಯತೆಯಿದೆ.

ಹವಾಮಾನ ಇಲಾಖೆ ಮೂಲಗಳ ಪ್ರಕಾರ ದೇಶದ ಹವಾಮಾನದಲ್ಲಿ ಬದಲಾವಣೆಯಾಗುತ್ತಿದ್ದು, ಕರ್ನಾಟಕ ಸೇರದಂತೆ ಮಹಾರಾಷ್ಟ್ರ, ಕೇರಳ, ಆಂಧ್ರ ಪ್ರದೇಶದ ಹಲವು ಭಾಗಗಳಲ್ಲಿ ಮಳೆ ಇನ್ನಷ್ಟು ಬಿರುಸಾಗಲಿದೆ. ಈ ಬೆಳವಣಿಗೆ ಜು.19ರ ತನಕ ಮುಂದುವರಿಯಲಿದೆ.

ಎಲ್ಲೆಲ್ಲಿ ಮಳೆ: ರಾಜ್ಯದ ಕರಾವಳಿ ಭಾಗಗಳಾದ ದಕ್ಷಿಣ ಕನ್ನಡ, ಉಡುಪಿ, ಮಲೆನಾಡು ಭಾಗ, ದಕ್ಷಿಣ ಮತ್ತು ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆ ಸುರಿಯುವ ಸಾಧ್ಯತೆ ಇದೆ. ಇದಕ್ಕೆ ಪೂರಕವಾಗಿ ಕರಾವಳಿ ಜಿಲ್ಲೆಗಳಲ್ಲಿ ಶುಕ್ರವಾರ ರಾತ್ರಿಯಿಂದಲೇ ಧಾರಾಕಾರ ಮಳೆಯಾಗುತ್ತಿದೆ.

ಮತ್ತೆ ವಾಯುಭಾರ ಕುಸಿತ: ಅರಬ್ಬೀ ಸಮುದ್ರದಲ್ಲಿ ಉಂಟಾಗಿದ್ದ ಮೇಲ್ಮೈ ಸುಳಿಗಾಳಿ ಇನ್ನೂ ಪ್ರಬಲವಾಗಿಯೇ ಮುಂದುವರಿದಿದ್ದು, ರಾಜ್ಯದ ಪಶ್ಚಿಮ ಘಟ್ಟಗಳತ್ತ ಗಂಟೆಗೆ ಸುಮಾರು 50 ಕಿ. ಮೀ. ವೇಗದಲ್ಲಿ ಚಲಿಸುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು