8:13 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಚಾತುರ್ಮಾಸ ಪ್ರಯುಕ್ತ ಕಾಶೀ ಮಠಾಧೀಶರ ಪುರ ಪ್ರವೇಶ: ಮಂಗಳೂರಿನಲ್ಲಿ ಶ್ರೀಗಳಿಗೆ ಪೂರ್ಣಕುಂಭ ಸ್ವಾಗತ

09/07/2022, 22:54

ಚಿತ್ರ : ಮಂಜು ನೀರೇಶ್ವಾಲ್ಯ
ಮಂಗಳೂರು(reporterkarnataka.com):  ಶ್ರೀ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಶುಭ ಕೃತ ನಾಮ ಸಂವತ್ಸರದ ಚಾತುರ್ಮಾಸ ವ್ರತಾಚರಣೆಯು ಜುಲೈ 18ರಿಂದ  ಈ ಬಾರಿ ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನಡೆಯಲಿದ್ದು, ಈ ಪ್ರಯುಕ್ತ ಶ್ರೀಗಳವರ ಪುರ ಪ್ರವೇಶ ಶನಿವಾರ ನಗರದ ರಥಬೀದಿಯಲ್ಲಿ ನಡೆಯಿತು. 

ಶ್ರೀಗಳವರು ಕೊಂಚಾಡಿ ಮೊಕ್ಕಾಂ ನಿಂದ ಆಗಮಿಸಿದ್ದು ಶ್ರೀಗಳವರಿಗೆ ಭವ್ಯ ಪೂರ್ಣಕುಂಭ ಸ್ವಾಗತ ನೀಡಲಾಯಿತು.  ಪುರ ಪ್ರವೇಶ ಕಾರ್ಯಕ್ರಮವು ಸ್ವದೇಶೀ ಸ್ಟೋರ್ಸ್ ಬಳಿಯಿಂದ ಪ್ರಾರಂಭಗೊಂಡು ಶ್ರೀ ದೇವಳದ ವರೆಗೆ ನಡೆಯಿತು. ಈ  ಸಂದರ್ಭದಲ್ಲಿ ವಿಶೇಷ ಚಂಡೆವಾದನ, ವಾರ್ಕರಿ ತಂಡದಿಂದ ಹಾಗೂ ವಿವಿಧ ಭಜನಾ ಮಂಡಳಿಗಳಿಂದ ಭಜನೆ ಬಳಿಕ ಶ್ರೀಗಳವರು ಶ್ರೀ ದೇವರ ದರ್ಶನ ಪಡೆದು , ದೇವಳದ ಆಡಳಿತ ಮಂಡಳಿ ಯ ಪದಾಧಿಕಾರಿಗಳು ಪಾದಪೂಜೆ ನೆರವೇರಿಸಿದರು .  

ಇತ್ತೀಚಿನ ಸುದ್ದಿ

ಜಾಹೀರಾತು