ಇತ್ತೀಚಿನ ಸುದ್ದಿ
ಬೆಳಗಾವಿಯ ಶಿರಹಟ್ಟಿ ಗ್ರಾಮದಲ್ಲಿ ಭೂಕಂಪನ: ಭಯಭೀತರಾದ ಜನ; ಗ್ರಾಮಕ್ಕೆ ಅಧಿಕಾರಿಗಳು ಭೇಟಿ
10/07/2022, 14:15

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com
ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಶಿರಹಟ್ಟಿ ಗ್ರಾಮದಲ್ಲಿ ಮುಂಜಾನೆ 6.20ಕ್ಕೆ ಭೂಕಂಪನವಾ ಗಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ಕಂಪನಕ್ಕೊಳಗಾದ ಪ್ರದೇಶಗಳಿಗೆ ಅಥಣಿ ತಾಲೂಕು ಆಡಳಿತ ಅಧಿಕಾರಿಗಳು ಭೇಟಿ ನೀಡಿ ಗ್ರಾಮಸ್ಥರ ಜತೆ ಸಮಾಲೋಚನೆ ನಡೆಸಿದ್ದಾರೆ.
ಅಥಣಿ ತಹಶೀಲ್ದಾರ್ ಸುರೇಶ್ ಮುಂಜೇ ಹಾಗೂ ಅಥಣಿ ಡಿವೈಎಸ್ಪಿ ಎಸ್. ವಿ. ಗಿರೀಶ್ ಹಾಗೂ ಸಿಪಿಐ ಶಂಕರಗೌಡ ಬಸನಗೌಡರ ಭೇಟಿ ಗ್ರಾಮಸ್ಥರಿಗೆ ಧೈರ್ಯ ಹೇಳಿದರು. ಭೂಕಂಪದಿಂದ ಹಾನಿ ಸಂಭವಿಸಿದ ಮನೆಗಳನ್ನು ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದೇ ಸಂದರ್ಭದಲ್ಲಿ ಮಾಧ್ಯಮ ಜೊತೆ ಮಾತನಾಡಿದ ಅವರು, ಶಿರಹಟ್ಟಿ ಗ್ರಾಮದಲ್ಲಿ ಮುಂಜಾನೆ 6.20 ಆಸುಪಾಸಿನಲ್ಲಿ ಭೂಕಂಪ ಆಗಿದ್ದು. ರಿಕ್ಟರ್ ಮಾಪಕದಲ್ಲಿ 3.0 ತೀವ್ರತೆ ದಾಖಲಾಗಿದೆ.
ಯಾವುದೇ ಜೀವಹಾನಿ ಸಂಭವಿಸಿಲ್ಲ. ಕೆಲವು ಮನೆಗಳು ಬಿರುಕು ಬಿಟ್ಟಿದೆ ಎಂದು ಹೇಳುತ್ತಿದ್ದಾರೆ. ಆ ಬಿರುಕು ಬಿಟ್ಟ ಮನೆಗಳು ಹಳೆ ಬಿರುಕುಗಳು ಎಂದು ತಿಳಿದು ಬಂದಿದೆ. ಗ್ರಾಮಸ್ಥರು ಯಾರು ಆತಂಕಕ್ಕೆ ಒಳಗಾಗಬಾರದು ಎಂದು ಹೇಳಿದರು.