ಇತ್ತೀಚಿನ ಸುದ್ದಿ
ಬೆಂಗಳೂರು : ಖಾಲಿ ನಿವೇಶನದಲ್ಲಿ ಗಾಂಜಾ ಬೆಳೆ !!
13/07/2022, 14:20
ಬೆಂಗಳೂರು:Reporterkarnataka.com: ಬೆಂಗಳೂರಿನ ಆರ್.ಟಿ.ನಗರದ ಖಾಲಿ ನಿವೇಶನದಲ್ಲಿ ಗಾಂಜಾ ಗಿಡ ಪತ್ತೆಯಾಗಿದೆ. ಕಿಡಿಗೇಡಿಗಳು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಮನೆಯ ಹಿಂಭಾಗ ಖಾಲಿ ನಿವೇಶನದಲ್ಲಿ ಗಾಂಜಾ ಗಿಡಗಳನ್ನು ಬೆಳೆದಿದ್ದರು.
ಮಾಹಿತಿ ಆಧರಿಸಿ ಆರ್.ಟಿ.ನಗರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಂಜಾ ಗಿಡಗಳನ್ನು ತೆರವುಗೊಳಿಸಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸರು ಖಾಲಿ ನಿವೇಶನದ ಮಾಲೀಕರ ಮಾಹಿತಿ ಕಲೆಹಾಕುತ್ತಿದ್ದಾರೆ. ಆರ್.ಟಿ.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.