1:57 PM Monday15 - June 2026
ಬ್ರೇಕಿಂಗ್ ನ್ಯೂಸ್
ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ…

ಇತ್ತೀಚಿನ ಸುದ್ದಿ

ಕಾರು-ಆಟೋ ಢಿಕ್ಕಿ: ಆಟೊದಲ್ಲಿದ್ದ ಮೂವರು ಮೃತ್ಯು, ಇಬ್ಬರು ಗಂಭೀರ” ಗಾಯ

14/07/2022, 14:27

ಮಂಡ್ಯ:Reporterkarnataka.com :ಕಾರು ಮತ್ತು ಆಟೊ ಮುಖಾಮುಖಿ ಡಿಕ್ಕಿ ಯಾದ ಘಟನೆ
ಮಳವಳ್ಳಿ ಪಟ್ಟಣದ ಹೊರವಲಯ ಕಣಿಗಲ್ ಗೇಟ್ ಬಳಿ ಬುಧವಾರ ತಡರಾತ್ರಿ ನಡೆದಿದೆ.

ಆಟೊದಲ್ಲಿದ್ದ ಮೂವರು ಮೃತಪಟ್ಟಿದು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ರವಿಕುಮಾರ್(50), ಭಾಸ್ಕರ್ (48) ಹಾಗೂ ಮೃತ ಪಟ್ಟ ಆಟೊ ಚಾಲಕ ಮದ್ದೂರು ತಾಲ್ಲೂಕಿನ ಹುಲಿಗೆರೆ ಗ್ರಾಮದ ಶ್ರೀನಿವಾಸ್ (35) ಎಂದು ಗುರುತಿಸಲಾಗಿದೆ.

ರವಿಕುಮಾರ್ ಜಯ ಕರ್ನಾಟಕ ಜನಪರ ವೇದಿಕೆಯ ರಾಜ್ಯ ಘಟಕದ ಕಾರ್ಯದರ್ಶಿಯಾಗಿದ್ದು, ತಮ್ಮ ಹುಟ್ಟೂರು ತಾಲ್ಲೂಕಿನ ಕಣಿಕಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ವಾಪಸ್ ಬೆಂಗಳೂರಿಗೆ ಆಟೊದಲ್ಲಿ ತೆರಳುತ್ತಿದ್ದರು. ರಾಷ್ಟ್ರೀಯ ಹೆದ್ದಾರಿಯ ಕಣಿಗಲ್ ಬಳಿ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ.

ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯಲ್ಲಿ ಆಟೊ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ ಕಾರು ಸಹ ಜಖಂಗೊಂಡಿದ್ದು . ಸ್ಥಳಕ್ಕೆ ಡಿವೈಎಸ್ಪಿ ನವೀನ್ ಕುಮಾರ್, ಸಿಪಿಐ ಎ.ಕೆ.ರಾಜೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು