ಇತ್ತೀಚಿನ ಸುದ್ದಿ
ಮಣ್ಣಗುಡ್ಡ ವಾರ್ಡಿನ ಮಿಷನ್ ಗೋರಿ ರಸ್ತೆ ಅಭಿವೃದ್ಧಿ ಕಾಮಗಾರಿ: ಶಾಸಕ ವೇದವ್ಯಾಸ್ ಕಾಮತ್ ಪರಿಶೀಲನೆ
14/07/2022, 19:06

ಮಂಗಳೂರು(reporterkarnataka.com):ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಮಣ್ಣಗುಡ್ಡೆ ವಾರ್ಡಿನಲ್ಲಿ ಅಭಿವೃದ್ಧಿಪಡಿಸಲಾಗುತ್ತಿರುವ ಮಿಷನ್ ಗೋರಿ ರಸ್ತೆಯನ್ನು ಶಾಸಕ ಡಿ. ವೇದವ್ಯಾಸ್ ಕಾಮತ್ ಪರಿಶೀಲನೆ ನಡೆಸಿ, ರಸ್ತೆ ಕಾಮಗಾರಿ ಶೀಘ್ರವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಿಷನ್ ಗೋರಿಯಿಂದ ಮಠದಕಣಿ ಸಂಪರ್ಕಿಸುವ ರಸ್ತೆಯ ಅಗಲಿಕರಣ ಹಾಗೂ ಅಭಿವೃದ್ಧಿಯ ಬಹುಕಾಲದ ಬೇಡಿಕೆಯಂತೆ ಅನುದಾನ ಹೊಂದಿಸಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಒಳಚರಂಡಿ ವ್ಯವಸ್ಥೆಯ ಬಹಳಷ್ಟು ಹಳೆಯ ಕೊಳವೆಗಳ ಬದಲಾವಣೆ ಹಾಗೂ ರಸ್ತೆ ಅಗಲೀಕರಣ ಕಾಮಗಾರಿ ಭಾಗಶಃ ಪೂರ್ಣಗೊಂಡಿದೆ ಎಂದು ಶಾಸಕ ಕಾಮತ್ ಹೇಳಿದರು.
24×7 ಕುಡಿಯುವ ನೀರು ಪೂರೈಸುವ ಜಲಸಿರಿ ಯೋಜನೆಯ ಪ್ರಮುಖ ಪೈಪ್ ಲೇನ್ ಕಾಮಗಾರಿ ಹಾಗೂ ಗೇಲ್ ಗ್ಯಾಸ್ ಲೇನ್ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು ಮನೆ ಮನೆಗೆ ಸಂಪರ್ಕ ಕಲ್ಪಿಸುವ ಕಾರ್ಯ ಆಗಬೇಕಿದೆ. ಪಾದಾಚಾರಿ ರಸ್ತೆ ನಿರ್ಮಾಣದ ಕಾಮಗಾರಿಯೂ ಕೂಡ ಪ್ರಗತಿಯ ಹಂತದಲ್ಲಿದ್ದು, ಪೂರ್ಣಗೊಂಡ ತಕ್ಷಣ ರಸ್ತೆ ಕಾಂಕ್ರೀಟಿಕರಣ ಕಾಮಗಾರಿ ಕಾಗೆತ್ತಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಸದ್ಯ ವಿಪರೀತ ಮಳೆ ಸುರಿಯುತ್ತಿರುವುದರಿಂದ ಕಾಮಗಾರಿ ನಿರೀಕ್ಷಿತ ಮಟ್ಟದ ವೇಗದಲ್ಲಿ ಕಾಮಗಾರಿ ನಡೆಸಲಾಗುತ್ತಿಲ್ಲ. ಆದರೂ ಸಾರ್ವಜನಿಕರ ಸಮಸ್ಯೆಯನ್ನು ಪರಿಗಣಿಸಿ ಸಾಧ್ಯವಾದಷ್ಟು ಬೇಗನೇ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಶಾಸಕ ಕಾಮತ್ ಹೇಳಿದ್ದಾರೆ.
ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಸಂಧ್ಯಾ ಮೋಹನ್ ಆಚಾರ್, ಮುಖಂಡರಾದ ವಸಂತ್ ಶೇಟ್, ಗೋಕುಲ್ ದಾಸ್ ಭಟ್, ಮೋಹನ್ ಆಚಾರ್, ವಸಂತ್ ಜೆ ಪೂಜಾರಿ, ಸ್ಥಳೀಯ ಕಾರ್ಯಕರ್ತರು, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.