12:19 AM Monday27 - October 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್‌ ಸರ್ಕಾರ ರಸ್ತೆಗಳ ಅಭಿವೃದ್ಧಿ ಮರೆತಿದೆ, ಒಂದು ಲೇಯರ್‌ ಗೆ 4-5 ಸಾವಿರ… ಮತ ಚೋರಿ ತಡೆಗೆ ಕೈ ಕಾರ್ಯಪಡೆ!: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಹೆಬ್ಬಾಳ… Chikkamagaluru | ಚಾರ್ಮಾಡಿ ಘಾಟಿಯಲ್ಲಿ ಕಾರು ಪಲ್ಟಿ: 3 ಮಂದಿ ಪ್ರಾಣಾಪಾಯದಿಂದ ಪಾರು Kodagu | ಸುಂಟಿಕೊಪ್ಪ: ಕ್ರಿಕೆಟ್ ಆಡುತ್ತಿದ್ದ ವೇಳೆ ಯುವಕ ಹೃದಯಘಾತದಿಂದ ದಾರುಣ ಸಾವು ಮಾಧ್ಯಮ ಅಕಾಡೆಮಿಯಲ್ಲಿ ಟಿಜೆಎಸ್ ಜಾರ್ಜ್‌ ದತ್ತಿ ರಾಷ್ಟ್ರೀಯ ಪ್ರಶಸ್ತಿ ಸ್ಥಾಪನೆ Bangaluru | ಪಿಡಿಪಿಎಸ್‌ಯಡಿ ಈರುಳ್ಳಿ ಖರೀದಿ ಪ್ರಯತ್ನ: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ… Bangaluru | ರಾಜ್ಯ ಸರಕಾರಕ್ಕೆ ಕೆಎಸ್ ಡಿಎಲ್ ರಿಂದ 135 ಕೋಟಿ ಡಿವಿಡೆಂಡ್… ಬೆಂಗಳೂರು ಲಾಡ್ಜ್‌ನಲ್ಲಿ ಯುವತಿ ಜತೆ ತಂಗಿದ್ದ ಯುವಕನ ಸಾವಿಗೆ ಕಿಡ್ನಿ ವೈಫಲ್ಯ ಕಾರಣ:… ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ: ಕಡೂರು ಸಮೀಪದ ಹಡಗಲು ಗ್ರಾಮ ಅಕ್ಷರಶಃ ಜಲಾವೃತ ಕೊಡಗಿನಲ್ಲಿ ಅಸ್ಸಾಂ ಕಾರ್ಮಿಕರಿಂದ ಆಟೋ ಚಾಲಕನ ಮೇಲೆ ಹಲ್ಲೆ: ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ…

ಇತ್ತೀಚಿನ ಸುದ್ದಿ

ಮದ್ಯ ಸೇವನೆ: ದಕ್ಷಿಣ ಕನ್ನಡ ಜಿಲ್ಲೆಗೆ ಅಗ್ರ ಸ್ಥಾನ!!; ವರ್ಷದಲ್ಲಿ ಸುಮಾರು 2.2 ಕೋಟಿ ಲೀಟರ್ ಲಿಕ್ಕರ್ ಮಾರಾಟ!

14/07/2022, 23:29

ಮಂಗಳೂರು(reporterkarnataka.com): ಬುದ್ದಿವಂತರ ಜಿಲ್ಲೆ ಎಂದು ಖ್ಯಾತಿ ಪಡೆದಿರುವ ದಕ್ಷಿಣ ಕನ್ನಡ ಜಿಲ್ಲೆ ಮತ್ತೆ ಮುನ್ನಲೆಗೆ ಬಂದಿದೆ. ಈ ಬಾರಿ ನೆಗೆಟಿವ್ ಆಗಿ ಸುದ್ದಿಯಲ್ಲಿದೆ. ಮದ್ಯ ಸೇವನೆಯಲ್ಲಿ ಇಡೀ ರಾಜ್ಯದಲ್ಲೇ ದ.ಕ. ಪ್ರಥಮ ಸ್ಥಾನದಲ್ಲಿದೆ.

ಆಘಾತಕಾರಿ ಅಂಶವೆಂದರೆ ಜಿಲ್ಲೆಯಲ್ಲಿ ಮದ್ಯ ಸೇವನೆ ಪ್ರಮಾಣ ಜಾಸ್ತಿಯಾಗುತ್ತಿದೆ. ಪ್ರತಿ ವರ್ಷ ಸುಮಾರು 2.2 ಕೋಟಿ ಲೀಟರ್ (ದಿನಕ್ಕೆ ಸುಮಾರು 60 ಲೀಟರ್‍ ಹಾರ್ಡ್ ಲಿಕ್ಕರ್, 1.4 ಕೋಟಿ ಲೀಟರ್ ಬಿಯರ್ ಮದ್ಯ ಮಾರಾಟವಾಗಿದೆ). ಆ ಮೂಲಕ ದಕ್ಷಿಣ ಕನ್ನಡ ಮದ್ಯ ಸೇವನೆಯಲ್ಲಿ ರಾಜ್ಯದಲ್ಲಿಯೇ ಅಗ್ರಸ್ಥಾನ ಪಡೆದಿದೆ.

ಜಿಲ್ಲೆಯಲ್ಲಿ ಕಳೆದ 5 ವರ್ಷಗಳಲ್ಲಿ ಸರಾಸರಿ 25 ಲಕ್ಷ ಬಾಕ್ಸ್ ‘ಹಾರ್ಡ್ ಡ್ರಿಂಕ್ಸ್ ಮದ್ಯವನ್ನು ಸೇವಿಸಲಾಗಿದೆ. ವರ್ಷಕ್ಕೆ ಸರಾಸರಿ 18 ಲಕ್ಷ ಬಾಕ್ಸ್ ಬಿಯರ್ ಮಾರಾಟವಾಗುತ್ತಿದೆ. ಈ ಆರ್ಥಿಕ ವರ್ಷದಲ್ಲಿ ಸುಮಾರು 370 ಕೋಟಿ ರೂಪಾಯಿ ಆದಾಯ ಮದ್ಯ ಮಾರಾಟದಿಂದ ಬಂದಿದೆ ಎಂದು

ಅಬಕಾರಿ ಇಲಾಖೆ ವರದಿ ತಿಳಿಸಿದೆ.

ಜಿಲ್ಲೆಯಲ್ಲಿ 180 ಎಂಎಲ್ ಸ್ಯಾಚೆಟ್ ಅಥವಾ ಬಾಟಲಿ ಮದ್ಯಗಳು ಅತಿ ಹೆಚ್ಚು ಮಾರಾಟವಾಗುತ್ತಿವೆ. ಕೇರಳ-ಕರ್ನಾಟಕದ ಗಡಿಭಾಗದ ಪ್ರದೇಶದಲ್ಲಿ ಮದ್ಯ ಸೇವನೆ ಮಾಡುವವರು ಜಿಲ್ಲೆಯಿಂದಲೇ ಹೆಚ್ಚಾಗಿ ಮದ್ಯ ಖರೀದಿಸುತ್ತಾರೆ. ಕೋವಿಡ್ ಸಾಂಕ್ರಾಮಿಕ ರೋಗದಿಂದ ಈ ಭಾಗದಲ್ಲಿ ಖರೀದಿ ಕಡಿಮೆಯಾಗಿದ್ದು, ಇಲ್ಲಿನ ವ್ಯಾಪಾರ ಇನ್ನಷ್ಟೇ ಕುದುರಬೇಕಿದೆ’ ಎಂದು ಅಬಕಾರಿ ಇಲಾಖೆಯ ಉಪ ಆಯುಕ್ತ ಬಿಂದುಶ್ರೀ ಪಿ ಹೇಳಿದ್ದಾರೆಂದು ‘ಟೈಮ್ಸ್ ಆಫ್ ಇಂಡಿಯಾ’ ಉಲ್ಲೇಖಿಸಿದೆ. ಕಳೆದ ಐದು ವರ್ಷಗಳಲ್ಲಿ ಮದ್ಯದ ಅಂಗಡಿಗಳ ಸಂಖ್ಯೆ ಏರಿಕೆ ಕಂಡಿದ್ದು ಪ್ರಸ್ತುತ 520 ಮದ್ಯದಂಗಡಿಗಳಿವೆ. ಕಳೆದ ವರ್ಷ 463 ಮದ್ಯದಂಗಡಿಗಳಿದ್ದವು ಎಂದು ಅವರು ತಿಳಿಸಿದ್ದಾರೆ.

2017-2018ರ ಆರ್ಥಿಕ ವರ್ಷದಿಂದ ಮದ್ಯದ ಮಾರಾಟವು ಸ್ಥಿರವಾಗಿದೆ. 2020-21ರವರಗೆ ವಾರ್ಷಿಕವಾಗಿ ಸರಾಸರಿ 25 ಲಕ್ಷ ಬಾಕ್ಸ್ ಗಳು (ಕೇಸ್ ಮಾರಟವಾಗಿವೆ. ಕೋವಿಡ್ ಕಾರಣದಿಂದ ಮದ್ಯದ ಅಂಗಡಿಗಳು ಮುಚ್ಚಿದ್ದು, ಕೇವಲ 22 ಲಕ್ಷಕ್ಕೆ ಪಟ್ಟಣಗಳು ಮಾರಟವಾಗಿದ್ದವು. ಆದರೆ ಈ ಆರ್ಥಿಕ ವರ್ಷದಲ್ಲಿ (2021-2022) 27 ಲಕ್ಷ ಬಾಕ್ಸ್‌ಗಳು ಮಾರಟವಾಗಿವೆ. ಕಳೆದ ಐದು ವರ್ಷಗಳಲ್ಲಿ ಮದ್ಯ ಮಾರಾಟದ ಆದಾಯ 285 ಕೋಟಿಯಿಂದ 370 ಕೋಟಿಗೆ ಏರಿಕೆಯಾಗಿದೆ ಎಂದು ಅಂಕಿ ಅಂಶಗಳಿಂದ ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು