ಇತ್ತೀಚಿನ ಸುದ್ದಿ
ವಿಮಾನದಲ್ಲಿ ಹೈಡ್ರಾಲಿಕ್ ವೈಫಲ್ಯ: ಕೊಚ್ಚಿ ಏರ್ ಪೋರ್ಟ್ ನಲ್ಲಿ ತುರ್ತು ಭೂಸ್ಪರ್ಶ; ‘ಎಮರ್ಜೆನ್ಸಿ’ ಘೋಷಣೆ
16/07/2022, 00:17

ಕೊಚ್ಚಿ(reporterkarnataka.com): ಕೊಚ್ಚಿ ವಿಮಾನ ನಿಲ್ದಾಣಕ್ಕೆ ಶಾರ್ಜಾದಿಂದ ಆಗಮಿಸಿದ ವಿಮಾನದಲ್ಲಿ ಹೈಡ್ರಾಲಿಕ್ ವೈಫಲ್ಯ ಕಂಡು ಬಂದ ಹಿನ್ನೆಲೆಯಲ್ಲಿ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ತುರ್ತು ಭೂಸ್ಪರ್ಶ ಮಾಡಲಾಯಿತು.
ಶಾರ್ಜಾದಿಂದ ಬರುತ್ತಿದ್ದ ವಿಮಾನದ ಹೈಡ್ರಾಲಿಕ್ ವೈಫಲ್ಯದ ಕಾರಣದಿಂದ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶಕ್ಕೆ ಅವಕಾಶ ನೀಡಲಾಗಿತ್ತು. ಅಲ್ಲದೇ ವಿಮಾನ ನಿಲ್ದಾಣದಲ್ಲಿ ಸಂಪೂರ್ಣವಾಗಿ ತುರ್ತುಸ್ಥಿತಿಯನ್ನು ಘೋಷಿಸಲಾಗಿತ್ತು. ಇದೀಗ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ ಎಂಬುದಾಗಿ ಹೇಳಿದೆ.
ದೇಶದಲ್ಲಿ ವಿಮಾನಗಳ ಅವಘಡ ಮುಂದುವರೆದಿದೆ. ಈ ಹಿಂದೆ ಸ್ಪೈಸ್ ಜೆಟ್ ಸೇರಿದಂತೆ ಹಲವು ವಿಮಾನಗಳು ತಾಂತ್ರಿಕ ದೋಷದ ಕಾರಣದಿಂದಾಗಿ ತುರ್ತು ಭೂ ಸ್ಪರ್ಶ ಮಾಡಿದ್ದವು.