11:19 AM Saturday13 - December 2025
ಬ್ರೇಕಿಂಗ್ ನ್ಯೂಸ್
ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ ಆರೆಸ್ಸೆಸ್ ಅಂದ್ರೆ ಉರಿಯುವ ಕಾಂಗ್ರೆಸ್ ನಾಯಕರಿಗೆ ಅವರ ಸರ್ಕಾರದಿಂದಲೇ ಉತ್ತರ: ಕೇಂದ್ರ ಸಚಿವ… ಮೈಸೂರು-ಕುಶಾಲನಗರ ಹೆದ್ದಾರಿ ಪ್ಯಾಕೇಜ್ 2 ಕಾಮಗಾರಿ ಆರಂಭ: 4126 ಕೋಟಿ ವೆಚ್ಚದಲ್ಲಿ ಅಗಲೀಕರಣ ಭೂ ಪರಿವರ್ತನೆ ನಿಯಮಗಳ ಸರಳೀಕರಣ: ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ

ಇತ್ತೀಚಿನ ಸುದ್ದಿ

ಸರಕಾರಿ ಕಚೇರಿಯಲ್ಲಿ ಅನಧಿಕೃತ ಪೋಟೊ, ವೀಡಿಯೋ ನಿಷೇಧ: 24 ತಾಸಿನೊಳಗೆ ಸರಕಾರ ಯುಟರ್ನ್ !; ಆದೇಶ ವಾಪಸ್

16/07/2022, 09:49

ಬೆಂಗಳೂರು(reporterkarnataka.com):  ರಾಜ್ಯ ಸರಕಾರ ತಾನು ಮಾಡಿದ ಆದೇಶವನ್ನು 24 ತಾಸಿನೊಳಗೆ ವಾಪಸ್ ಪಡೆದಿದೆ. ರಾಜ್ಯದ ಎಲ್ಲ ಸರಕಾರಿ ಇಲಾಖೆಗಳ ಕಚೇರಿಗಳಲ್ಲಿ ಪೂರ್ವಾನುಮತಿ ಇಲ್ಲದೆ ಸಾರ್ವಜನಿಕರು ಅನಧಿಕೃತವಾಗಿ ಫೋಟೋ, ವಿಡಿಯೋ ಮಾಡಬಾರದು ಎಂದು ಹೊರಡಿಸಿದ ಆದೇಶವನ್ನು ತಡರಾತ್ರಿ ವಾಪಸ್ ಪಡೆದಿದೆ.

ರಾಜ್ಯ ಸರಕಾರದ ಅಧೀನಕ್ಕೊಳಪಟ್ಟ ಎಲ್ಲ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಫೋಟೋ ಅಥವಾ ವಿಡಿಯೋ ಮಾಡದಂತೆ ನಿಷೇಧಿಸಿ ಸರಕಾರ ಜುಲೈ 15ರಂದು ಆದೇಶ ಹೊರಡಿಸಿತ್ತು. ಸರಕಾರಿ ನೌಕರರ ಮನವಿಯ ಮೇರೆಗೆ ಸರಕಾರ ಈ ಆದೇಶ ಹೊರಡಿಸಿತ್ತು. ಆದರೆ ಆದೇಶಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ವಾಪಸ್ ಪಡೆದಿದೆ.

ಈ ಆದೇಶದ ಹಿಂದೆ ಭ್ರಷ್ಟಾಚಾರ ಅಡಗಿದೆ. ಕಚೇರಿಯೊಳಗೆ ವಿಡಿಯೋ ಪೋಟೊ ತೆಗೆದರೆ ಸಂಪೂರ್ಣ  ಮಾಹಿತಿ ಲಭ್ಯವಾಗುತ್ತದೆ. ಇದರ ಹಿಂದೆ ಷಡ್ಯಂತರ ಅಡಗಿದೆ ಎಂದು ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು