6:26 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಉರ್ವಸ್ಟೋರ್ ಸುಂಕದಕಟ್ಟೆ; ಮಳೆಯಿಂದ ಹಾನಿಗೀಡಾದ ಮನೆಗೆ ಶಾಸಕ ವೇದವ್ಯಾಸ್ ಕಾಮತ್  ಭೇಟಿ 

16/07/2022, 10:33

ಮಂಗಳೂರು(reporterkarnataka.com) :ದೇರೇಬೈಲ್ ಪಶ್ಚಿಮ ವಾರ್ಡಿನ ಉರ್ವಸ್ಟೋರ್ ಸುಂಕದಕಟ್ಟೆಯಲ್ಲಿ ಮಳೆಯಿಂದಾಗಿ ಹಾನಿಗೀಡಾದ ಮನೆಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. 

ಈ ವೇಳೆ ಮಾತನಾಡಿದ ಶಾಸಕ ಕಾಮತ್, ಸುಂಕದಕಟ್ಟೆಯ ಪದ್ಮಾವತಿ ಎಂಬವರ ಮನೆಯು ಸಂಪೂರ್ಣವಾಗಿ ಹಾನಿಗೀಡಾಗಿದ್ದು ಅದೃಷ್ಟವಶಾತ್ ಜೀವಹಾನಿಯಾಗಿಲ್ಲ. ಈಗಾಗಲೇ ನಮ್ಮ ಕಾರ್ಯಕರ್ತರು ಕುಟುಂಬವನ್ನು ಅಲ್ಲಿಂದ ಬೇರೆಡೆ ಸ್ಥಳಾಂತರಿಸಿದ್ದು ದಿನಸಿ ಸಾಮಗ್ರಿಗಳ ವ್ಯವಸ್ಥೆ ಕಲ್ಪಿಸಲು ಸೂಚನೆ ನೀಡಿದ್ದೇನೆ ಎಂದು ಹೇಳಿದರು. 

ರಾಜ್ಯ ಸರಕಾರದಿಂದ ಸಂಪೂರ್ಣವಾಗಿ ಹಾನಿಗೀಡಾದ ಮನೆಗಳಿಗೆ 5 ಲಕ್ಷ ಪರಿಹಾರ ನೀಡಲಾಗುತಿದ್ದು, ಬೇಕಾಗಿರುವ‌ ದಾಖಲೆಗಳನ್ನು ಪಡೆದು ತಕ್ಷಣವೇ ಪರಿಹಾರ ಧನ ಬಿಡುಗಡೆಗೆ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ. ರಾಜ್ಯ ಸರಕಾರವು ಸಂಪೂರ್ಣವಾಗಿ ಹಾನಿಗೀಡಾದ ಮನೆಗಳಿಗೆ 5 ಲಕ್ಷ ಪರಿಹಾರ ಘೋಷಿಸಿರುವ ಕಾರಣ ಆರ್ಥಿಕವಾಗಿ ಹಿಂದುಳಿದ ಇಂತಹ ಅನೇಕ ಕುಟುಂಬಗಳಿಗೆ ಸಹಕಾರಿಯಾಗಿದೆ ಎಂದು ಶಾಸಕ ಕಾಮತ್ ನುಡಿದರು.

ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರುಗಳಾದ ಜಯಲಕ್ಷ್ಮಿ ಶೆಟ್ಟಿ, ಮನೋಜ್ ಕುಮಾರ್, ಬಿಜೆಪಿ ಮುಖಂಡರಾದ ವಿಜಯ್ ಕುಮಾರ್ ಶೆಟ್ಟಿ, ಅಮಿತ್ ರಾಜ್, ಪುಷ್ಪ ಶೆಟ್ಟಿ, ಗೀತಾ ಭವಾನಿ ಶಂಕರ್, ದೀಕ್ಷಿತ್, ನಾರಾಯಣ ಪೂಜಾರಿ, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು