4:09 PM Wednesday16 - July 2025
ಬ್ರೇಕಿಂಗ್ ನ್ಯೂಸ್
Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ… Vijayapura | ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ ಶಕ್ತಿ ಯೋಜನೆ: 500 ಕೋಟಿ ಮಹಿಳೆಯರಿಗೆ ತಲುಪಿದ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಮುಖ್ಯಮಂತ್ರಿ Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ…

ಇತ್ತೀಚಿನ ಸುದ್ದಿ

ಪತ್ನಿ ಮಾಂಗಲ್ಯ ತೆಗೆಯುವುದು ಪತಿಗೆ ನೀಡುವ ಮಾನಸಿಕ ಹಿಂಸೆ: ಮದ್ರಾಸ್ ಹೈಕೋರ್ಟ್

16/07/2022, 13:31

ಚೆನ್ನೈ(reporterkarnataka.com): ಮಹಿಳೆಯ ಕುತ್ತಿಗೆಯಲ್ಲಿರುವ ತಾಳಿ ಪವಿತ್ರವಾದ ವಿಷಯವಾಗಿದ್ದು, ಅದನ್ನು ಗಂಡನ ಮರಣದ ನಂತರ ಮಾತ್ರ ತೆಗೆದುಹಾಕಲಾಗುತ್ತದೆ. ಗಂಡನಿಂದ ದೂರವಾದ ಪತ್ನಿಯು ಮಾಂಗಲ್ಯವನ್ನು ಕತ್ತಿನಿಂದ ತೆಗೆಯುವುದನ್ನು ಗಂಡನಿಗಾಗುವ ಮಾನಸಿಕ ಕ್ರೌರ್ಯವೆಂದು ಪರಿಗಣಿಸಿ ಮದ್ರಾಸ್ ಹೈಕೋರ್ಟ್ ವ್ಯಕ್ತಿಯೊಬ್ಬನಿಗೆ ವಿಚ್ಛೇದನ ಪಡೆಯಲು ಅನುಮತಿ ನೀಡಿದೆ.

ಹೆಂಡತಿ ಮಾಂಗಲ್ಯ ಧರಿಸುತ್ತಿಲ್ಲ ಎಂದು ನೊಂದ ವ್ಯಕ್ತಿ ವಿಚ್ಛೇದನ ಕೋರಿ ಸಲ್ಲಿಸಿದ ಅರ್ಜಿಗೆ ಸುಪ್ರೀಂ ಕೋರ್ಟ್  ಒಪ್ಪಿಗೆ ನೀಡಿದೆ.

ತಮಿಳುನಾಡು ಈ ರೋಡ್ ನ ವೈದ್ಯಕೀಯ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಸಿ. ಶಿವಕುಮಾರ್ ಅವರ ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ವಿ.ಎಂ. ವೇಲುಮಣಿ ಮತ್ತು ಎಸ್. ಸೌಂಥರ್ ಅವರ ವಿಭಾಗೀಯ ಪೀಠವು ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ. ತನಗೆ ವಿಚ್ಛೇದನ ನೀಡಲು ನಿರಾಕರಿಸಿದ ಸ್ಥಳೀಯ ಕೌಟುಂಬಿಕ ನ್ಯಾಯಾಲಯದ 2016 ಜೂನ್ 15ರ ಆದೇಶಗಳನ್ನು ರದ್ದುಗೊಳಿಸುವಂತೆ ಅವರು ಕೋರಿದ್ದರು.

ಈ ಬಗ್ಗೆ ಮಹಿಳೆಯ ವಿಚಾರಣೆ ನಡೆಸಿದಾಗ ಆಕೆ ಗಂಡನಿಂದ ದೂರವಿದ್ದ ಸಮಯದಲ್ಲಿ ಮಾಂಗಲ್ಯವನ್ನು ತೆಗೆದಿಟ್ಟಿದ್ದಾಗಿ ಒಪ್ಪಿಕೊಂಡಿದ್ದು, ತಾನು ತಾಳಿಯನ್ನು ಇನ್ನೂ ಇಟ್ಟುಕೊಂಡಿದ್ದೇನೆ. ಆದರೆ, ಅದರ ಜೊತೆಗಿದ್ದ ಕರಿಮಣಿ ಸರವನ್ನು ಮಾತ್ರ ತೆಗೆದಿದ್ದೇನೆ ಎಂದು ಆಕೆ ತಿಳಿಸಿದ್ದಳು. ಮಾಂಗಲ್ಯವನ್ನು ತೆಗೆದುಹಾಕುವ ಕ್ರಿಯೆಗೆ ತನ್ನದೇ ಆದ ಮಹತ್ವವಿದೆ ಎಂದು ಕೋರ್ಟ್ ಹೇಳಿದೆ.

ಮಹಿಳೆಯ ಕುತ್ತಿಗೆಯಲ್ಲಿರುವ ತಾಳಿ ಪವಿತ್ರವಾದ ವಿಷಯವಾಗಿದ್ದು, ಅದು ವೈವಾಹಿಕ ಜೀವನದ ನಿರಂತರತೆಯನ್ನು ಸಂಕೇತಿಸುತ್ತದೆ. ಅದನ್ನು ಗಂಡನ ಮರಣದ ನಂತರ ಮಾತ್ರ ತೆಗೆದುಹಾಕಲಾಗುತ್ತದೆ. ಆದ್ದರಿಂದ, ಅರ್ಜಿದಾರರ ಹೆಂಡತಿ ಮಾಂಗಲ್ಯವನ್ನು ತೆಗೆದುಹಾಕುವ ಮೂಲಕ ಗಂಡನಿಗೆ ಮಾನಸಿಕ ಹಿಂಸೆ ನೀಡಿದ್ದಾರೆ ಎಂದು ಹೇಳಬಹುದು ಎಂದು ನ್ಯಾಯಪೀಠ ಹೇಳಿದೆ.

ಮೇಲ್ಮನವಿದಾರ ಮತ್ತು ಅವರ ಪತ್ನಿ 2011ರಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದು, ಈ ಅವಧಿಯಲ್ಲಿ ಪತ್ನಿ ಪುನರ್ಮಿಲನಕ್ಕೆ ಪ್ರಯತ್ನವನ್ನು ಮಾಡಿದ್ದಾರೆ ಎಂಬುದಕ್ಕೆ ಯಾವುದೇ ದಾಖಲೆಗಳಿಲ್ಲ. ಆದ್ದರಿಂದ ಪ್ರಕರಣದ ಸತ್ಯಗಳು ಮತ್ತು ಸನ್ನಿವೇಶಗಳಲ್ಲಿ ಮತ್ತು ಹೆಂಡತಿಯು ತನ್ನ ಕೃತ್ಯದಿಂದ ಪತಿಗೆ ಮಾನಸಿಕ ಕ್ರೌರ್ಯವನ್ನುಂಟುಮಾಡಿದ್ದಾಳೆಂದು ನಾವು ಗಮನಿಸಿದ್ದೇವೆ ಎಂದು ನ್ಯಾಯಾಲಯ ಹೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು